Mysore
23
overcast clouds

Social Media

ಶನಿವಾರ, 20 ಜೂನ್ 2026
Light
Dark

ಮುಡಾ ಅಧ್ಯಕ್ಷರಾಗಿ ಯಶಸ್ವಿ ಸೋಮಶೇಖರ್ ನೇಮಕ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರನ್ನು ರಾಜ್ಯಸರ್ಕಾರ ನೇಮಿಸಿದೆ. ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವ ಹೊತ್ತಲ್ಲೇ ಖಾಲಿ ಇದ್ದ ಮುಡಾ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆಯಲಾಗಿದೆ.
ರಾಜ್ಯದ ಹಲವಾರು ನಿಗಮ ಮಂಡಳಿ,ಪ್ರಾಧಿಕಾರದ ಅಧ್ಯಕ್ಷರನ್ನು ಬದಲಾಯಿಸಿ ಹೊಸಬರನ್ನು ನೇಮಕ ಮಾಡಿದಾಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಚ್.ವಿ.ರಾಜೀವ್ ಅವರ ಸ್ಥಾನಕ್ಕೆ ಯಾರನ್ನೂ ನೇಮಿಸಿರಲಿಲ್ಲ. ಹೀಗಾಗಿ, ಜುಲೈ 25 ರಂದು ಎಚ್.ವಿ.ರಾಜೀವ್ ಅವರ ಅಧಿಕಾರಾವಧಿ ಅಂತ್ಯವಾಗಿತ್ತು. ಅಲ್ಲಿಂದ ಈತನಕ ಯಾರನ್ನೂ ನೇಮಿಸದೆ ಖಾಲಿ ಉಳಿದಿತ್ತು. ಕಾಡಾ,ಮೃಗಾಲಯ,ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ,ಮೈಲ್ಯಾಕ್ಗೆ ನೂತನ ಅಧ್ಯಕ್ಷರನ್ನು ನೇಮಿಸಿದರೂ ಮುಡಾದ ಹುದ್ದೆ ಖಾಲಿ ಉಳಿದಿದ್ದರಿಂದ ಸಾಕಷ್ಟು ರಾಜಕೀಯ ಒತ್ತಡಗಳು ಉಂಟಾಗಿತ್ತು. ಅದರಂತೆ, ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು.

ಯಶಸ್ವಿ ಕುರಿತು: ಮೈಸೂರು ನಗರದಲ್ಲಿ ಕಳೆದ ಎರಡು ದಶಕಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವ ಯಶಸ್ವಿ ಸೋಮಶೇಖರ್ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ,ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿಮೂರು ವರ್ಷಗಳ ಕಾಲ ಕೆಲಸ ಮಾಡಿದ್ದರು. ರಿಯಲ್ ಎಸ್ಟೇಟ್, ಹೋಟೆಲ್ ಉದ್ಯಮದಲ್ಲೂ ತಮ್ಮನ್ನು ಗುರುತಿಸಿಕೊಂಡು ಕೆಲಸ ಮಾಡುತ್ತಿರುವ ಅವರಿಗೆ ಈಗ ಪ್ರತಿಷ್ಠಿತ ಮುಡಾ ಅಧ್ಯಕ್ಷಗಾದಿ ಒಲಿದಿದೆ. ನೇಮಕಾತಿ ಆದೇಶ ಸಿಕ್ಕಿರುವ ಕಾರಣ ಬುಧವಾರ ಬೆಳಿಗ್ಗೆ 11ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!