ಜಿಲ್ಲೆಗಳು

ನೂತನ ದೇವಾಲಯ ನಿರ್ಮಾಣಕ್ಕೆ ಭೂಮಿಪೂಜೆ

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮಣ ದೊಡ್ಡಿ ಗ್ರಾಮದಲ್ಲಿ ಕರುಪ್ಪಸ್ವಾಮಿ ನೂತನ ದೇವಾಲಯ ನಿರ್ಮಾಣಕ್ಕೆ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಸಂಚಾಲಕ ಜನಧ್ವನಿ ಬಿ.ವೆಂಕಟೇಶ್ ಇಂದು ಭೂಮಿಪೂಜೆ ನೆರವೇರಿಸಿದರು.
ಗ್ರಾಮದ ಸ್ಥಳಿಯ ಧಾರ್ಮಿಕ ಸಂಪ್ರದಾಯದಂತೆ ಸಸಿಗೆ ಆರತಿ ಬೆಳಗಿ ಪೂಜೆ ನೆರವೇರಿಸಿ ಹಾಲೆರೆದರು. ಈ ವೇಳೆ ಮಾತನಾಡಿದ ಬಿ. ವೆಂಕಟೇಶ್ ಅವರು ದೇವಾಲಯಗಳು ಜನತೆಯ ಶ್ರದ್ಧಾ ಭಕ್ತಿ ಜೊತೆಗೆ ಮನಶಾಂತಿಗೆ ಪೂರಕವಾದ ಕೇಂದ್ರಗಳಾಗಿವೆ. ಈ ದಿಸೆಯಲ್ಲಿ ಲಕ್ಷ್ಮಣ ದೊಡ್ಡಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗುತ್ತಿರುವ ಕರುಪ್ಪಸ್ವಾಮಿ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿರುವುದು ಸಂತಸ ತಂದಿದೆ  ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಂಡು ಸಾರ್ವಜನಿಕರ ಅನುಕೂಲಕ್ಕೆ ಬಳಕೆಯಾಗಲಿ ಎಂದು ಆಶೀಸಿದ ಅವರು ಕರುಪ್ಪಸ್ವಾಮಿ ದೇವರು ಜನತೆಗೆ ಸುಖ ಶಾಂತಿಯನ್ನು ಕರುಣಿಸಲಿ. ಗ್ರಾಮದ ಜನತೆಯ ಯಾವುದೇ ದುಃಖ ದುಮ್ಮಾನಗಳಿಗೆ ಎಂದಿಗೂ ನಾನು ಜೊತೆಯಾಗಿರುತ್ತೇನೆ ಎಂದು ಭರವಸೆ ನೀಡಿದರು.
ಆರತಿ ಎತ್ತಿ ಸ್ವಾಗತಿಸಿದ ಮಹಿಳೆಯರು: ಕರುಪ್ಪಸ್ವಾಮಿ ನೂತನ ದೇವಾಲಯ ನಿರ್ಮಾಣದ ಭೂಮಿ ಪೂಜೆಗೆ ಆಗಮಿಸಿದ ಬಿ. ವೆಂಕಟೇಶ್ ಅವರನ್ನು ಗ್ರಾಮದ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರು. ಗ್ರಾಮದ ಮುಖಂಡರುಗಳು ಶಾಲು ಹೂವಿನಹಾರ ಹಾಕಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಯಜಮಾನರುಗಳು, ಮುಖಂಡರುಗಳು, ಯುವಕರು, ಮಹಿಳೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

andolanait

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

53 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago