ಹನೂರು: ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದ ಬಳಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಂಕಲ್ಪ ಯಾತ್ರೆಯ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದರೆ ನಮ್ಮ ಸರ್ಕಾರದ ವತಿಯಿಂದ ಸಾಕಷ್ಟು ಅನುದಾನವನ್ನು ನೀಡುವ ಮೂಲಕ ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಉತ್ತಮ ಆಡಳಿತವನ್ನು ನೀಡುತ್ತಿದ್ದು, ಜಗತ್ತಿನ ರಾಷ್ಟ್ರಗಳು ಭಾರತ ದೇಶದತ್ತ ತಿರುಗಿ ನೋಡುವಂತಾಗಿದೆ. ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ, ಬಸವರಾಜು ಬೊಮ್ಮಾಯಿ ಉತ್ತಮ ಆಡಳಿತ ನೀಡಿದ್ದಾರೆ. ಆರವತ್ತು ವರ್ಷಗಳ ಆಳ್ವಿಕೆ ನಡೆಸಿದ ಕಾಂಗ್ರೇಸ್ ಭ್ರಷ್ಟಚಾರ, ಭಯೋತ್ಪಾದನೆ, ಪರಿವಾರವಾದ ವಿಭಜನೆವಾದ, ಮಾಡಿದೆ ಎಂದು ವ್ಯಂಗ್ಯವಾಡಿದರು.
ಗರೀಬ್ ಹಠವ್ ಹೆಸರಿನಲ್ಲಿ ಗಾಂಧಿ, ಖರ್ಗೆ, ಸಿದ್ರಾಮಯ್ಯ, ಡಿ.ಕೆ. ಶಿವಕುಮಾರ್ ಕುಟುಂಬದ ಬಡತನ ಹೋಗಿದೆ. ಸಿದ್ದರಾಮಯ್ಯ ಭಾರತ್ ಜೋಡೋ ಯಾತ್ರೆಯಲ್ಲಿ ಕ್ಷೇತ್ರ ಹುಡುಕುತ್ತಿದ್ದಾರೆ. ಬಾದಾಮಿ ಜನತೆ ನೀವು ಮುಂದಿನ ಚುನಾವಣೆಯಲ್ಲಿ ಎನ್ನುತ್ತಿದ್ದಾರೆ ಕೋಲಾರ,ಚಾಮುಂಡೇಶ್ವರಿಯಲ್ಲಿ ಇವರ ಬಗ್ಗೆ ಜನರು ಒಲವು ತೋರುವುದಿಲ್ಲ ಹೀಗಾಗಿ ಕ್ಷೇತ್ರ ಹುಡುಕುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರವೇ ಇಲ್ಲದಂತಾಗಿದೆ. ಅರ್ಕಾವತಿ ಹಗರಣ ಹೊರ ಬಂದರೆ ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ. ಡಿ.ಕೆ. ಶಿವಕುಮಾರ್ ತಿಹಾರ್ ಜೈಲಿಗೆ ಯಾಕೆ ಹೋಗಿ ಬಂದರು ಇತಿಹಾಸ ಬರೆಯಲ ಅಥವಾ ಕರ್ನಾಟಕದ ಬಗ್ಗೆ ತಿಳಿಸಲು ಹೋಗಿದ್ದರಾ ಎಂದರು.
ಸಿದ್ದರಾಮಯ್ಯ ಟಿಪ್ಪು ಜಯಂತಿ ತಂದು ಕೋಮುವಾದ ಸೃಷ್ಟಿಸಿದರು, ಲಿಂಗಾಯತ ಧರ್ಮವನ್ನು ಒಡೆಯುವ ಮೂಲಕ ಧರ್ಮ ದ್ರೋಹಿಯಾದರು. ಭಾರತ್ ಜೋಡೋ ಯಾತ್ರೆಯಿಂದ ಏನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಬಿಜೆಪಿಯಿಂದ ದೇಶದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ ಎಂದರು.
ನೆಹರು ಕಾಲದಲ್ಲಿ ಭಾರತ ದೇಶ ವಿಭಜನೆ ಆಯಿತು. ರಾಮ ರಾಜ್ಯ ಪರಿಕಲ್ಪನೆ ಹಾಗೂ ಗಾಂಧಿ ವಿಚಾರಗಳನ್ನು ಅನುಷ್ಠಾನ ತರಲು ಕಾಂಗ್ರೆಸ್ ನಿಂದ ತರಲು ಸಾಧ್ಯವಾಗಲಿಲ್ಲ ಗಾಂಧಿ ವಿಚಾರಗಳನ್ನು ಬಿಜೆಪಿ ಸರ್ಕಾರ ಅನುಷ್ಠಾನಕ್ಕೆ ತಂದಿದೆ ಎಂದರು.
ಕೇಂದ್ರದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್ ಸರ್ಕಾರ ಲಾಲ್ ಬಹುದ್ದೂರ್ ಶಾಸ್ತ್ರಿ ಹೊರತುಪಡಿಸಿ ಉಳಿದ ಎಲ್ಲಾ ಪ್ರಧಾನ ಮಂತ್ರಿಗಳ ಅವಧಿಯಲ್ಲಿ ಭ್ರಷ್ಟಾಚಾರ ತಾಂಡವಾಡಿದೆ. ಇವರು ನಮ್ಮ ಸರ್ಕಾರದ ವಿರುದ್ಧ ಮಾತನಾಡಲು ನೈತಿಕತೆ ಇಲ್ಲ ಎಂದರು
ಭ್ರಷ್ಟಾಚಾರ ನಿಗ್ರಹಕ್ಕೆ ಆದ್ಯತೆ; ಕಳೆದ 65 ವರ್ಷಗಳಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್ ಸರ್ಕಾರ ಭಯೋತ್ಪಾದನೆ ತಡೆಯಲು ವಿಫಲವಾಗಿದೆ. 2014ರ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಿರ್ಮೂಲನೆ ಮಾಡಿದೆ. ನಕ್ಸಲ್ ಚಟುವಟಿಕೆಗಳ ನಿರ್ಮೂಲನೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ಭಯೋತ್ಪಾದನೆಗೆ ಕುಮ್ಮಕು ನೀಡುತ್ತಿದ್ದ ಪಿ ಎಫ್ ಐ ಸಂಘಟನೆಯನ್ನು ನಿಷೇಧ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ರವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನಿಮಗೆ ತಾಕತ್ತಿದೆಯಾ; ಪ್ರತಿ ಬಾರಿಯೂ ಸಿದ್ದರಾಮಣ್ಣ ನಿಮಗೆ ತಾಕತ್ತಿದೆ ಎಂದು ಪ್ರಶ್ನಿಸುತ್ತಾರೆ ನಿಮಗೆ ತಾಕತ್ತಿದ್ದರೆ ಪಿಎಫ್ ಐ.ಎಸ್‌ಟಿಪಿಐ ಸಂಘಟನೆ ನಿಷೇಧ ಮಾಡಲು ಏಕೆ ಸಾಧ್ಯವಾಗಲಿಲ್ಲ. ಒಬ್ಬ ದಲಿತ ಶಾಸಕನ ಮನೆಗೆ ಮಾಜಿ ಮೇಯರ್ ಸಂಪತ್ ರಾಜ್ ಬೆಂಕಿ ಇಟ್ಟಾಗ ಇವನನ್ನು ರಕ್ಷಣೆ ಮಾಡಿದ್ದು ಎಷ್ಟರಮಟ್ಟಿಗೆ ಸರಿ ನಿಮಗೆ ನೈತಿಕತೆ ಇದ್ದರೆ ಇ ವನನ್ನು ಪಕ್ಷದಿಂದ ಉಚ್ಚಾಡಿಸಬೇಕಿತ್ತು ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ರಾಜ್ಯ ಕಾರ್ಯದರ್ಶಿ ಸಿದ್ದರಾಜು, ಮೈ.ವಿ.ರವಿಶಂಕರ್, ಎಂಎಲ್ ಮುನಿರಾಜು, ರಾಷ್ಟ್ರೀಯ ಪರಿಷತ್ ಸದಸ್ಯ ಬೂದುಬಾಳು ವೆಂಕಟಸ್ವಾಮಿ, ಕಾಡ ಅಧ್ಯಕ್ಷ ನಿಜಗುಣ ರಾಜು, ಜಿಲ್ಲಾಧ್ಯಕ್ಷ ಸುಂದರ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಮಂಗಲ ಶಿವಕುಮಾರ್, ಮಾಜಿ ಶಾಸಕಿ ಪರಿಮಳ ನಾಗಪ್ಪ, ನಂಜುಂಡಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ದತ್ತೇಶ್ ಕುಮಾರ್, ಪ್ರೀತನ್ ನಾಗಪ್ಪ, ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ. ವೆಂಕಟೇಶ್, ಹನೂರು ಮಂಡಲದ ಅಧ್ಯಕ್ಷ ಮಹಾಲಿಂಗನ ಕಟ್ಟೆ ಸಿದ್ದಪ್ಪ, ಮಲೆ ಮಹದೇಶ್ವರ ಬೆಟ್ಟ ಮಂಡಲದ ಅಧ್ಯಕ್ಷ ವೀರಭದ್ರ ಪ.ಪಂ.ಅಧ್ಯಕ್ಷ ಚಂದ್ರಮ್ಮ, ನಾಮ ನಿರ್ದೇಶಿತ ಸದಸ್ಯರಾದ ವೆಂಕಟೇಗೌಡ, ಪುಟ್ಟರಾಜು, ಎಸ್ಟಿ ಮೋರ್ಚಾದ ಅಧ್ಯಕ್ಷ ಜಯಸುಂದರ್, ರಮೇಶ್ ನಾಯ್ದು ಸೇರಿದಂತೆ ಇನ್ನಿತರ ಮುಖಂಡರುಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು .
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…
ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ…