ಮೈಸೂರು: ರಾಜ್ಯದೆಲ್ಲೆಡೆ ಕೋವಿಡ್ ರೂಪಾಂತರಿ ಜೆ.ಎನ್-1 ಹಂತ ಹಂತವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ಕೊವಿಡ್‌ನಿಂದಾಗಿ ರಾಜ್ಯದಲ್ಲಿ ಮೂವರು ಬಲಿಯಾಗಿದ್ದಾರೆ. ಈಗಾಗಲೇ ಮುನ್ನೆಚ್ಚಿರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಕೆಲವು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.
ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುನ್ನೆಚ್ಚಿಕೆ ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಇನ್ನು ಬರಲಿರುವ ಕ್ರಿಸ್‌ಮಸ್ ಹಾಗೂ ವರ್ಷಾಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕ್ರಿಸ್‌ಮಸ್ ಹಾಗೂ ವರ್ಷಾಚರಣೆಗೆ ಯಾವುದೇ ಪ್ರತ್ಯೇಕ ಮಾರ್ಗ ಸೂಚಿ ವಿಧಿಸಿಲ್ಲ. ಆದರೆ ಸಾರ್ವಜನಿಕರು ಮುನ್ನೆಚ್ಚಿಕೆ ವಹಿಸುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
60ವರ್ಷ ಮೇಲ್ಪಟ್ಟ, ಕಾಯಿಲೆಯಿಂದ ಬಳಲುತ್ತಿರುವ, ರೋಗಿಗಳು ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗುಂಪಿನಲ್ಲಿ ಸೇರಬಾರದು. ಅಂತರ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…