ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ನ.೧೮ ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಪರಿಷ್ಕೃತ ವಿವರ ಇಂತಿದೆ.
ಬೆಳಿಗ್ಗೆ ೧೧.೩೦ ಗಂಟೆಗೆ ತಾಲ್ಲೂಕಿನ ತಮ್ಮಡಹಳ್ಳಿಗೆ ಆಗಮಿಸಿ ಜಿಲ್ಲೆಯಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ತಾಲ್ಲೂಕಿನ ತಮ್ಮಡಹಳ್ಳಿ, ಉಡಿಗಾಲ ಹಾಗೂ ಆನೆಮಡುವಿನ ಕೆರೆಗಳಲ್ಲಿ ಸ್ಥಳ ಪರಿವೀಕ್ಷಣೆ ನಡೆಸುವರು.
ಮಧ್ಯಾಹ್ನ ೧೨.೩೦ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಹಾಗೂ ರೈತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಭೆ ನಡೆಸುವರು.
ಮಧ್ಯಾಹ್ನ ೧.೪೫ ಗಂಟೆಗೆ ತಾಲ್ಲೂಕಿನ ಸಿದ್ದಯ್ಯನಪುರದ ಮಂಟೇಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವರು. ಸಂಜೆ ೪ ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಅವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸುವರು. ಸಂಜೆ ೬.೩೦ ಗಂಟೆಗೆ ಶಿಂಷಾಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.





