ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಕಂಪ್ಯೂಟರ್ ಕೇಂದ್ರ ಮತ್ತು ಸಿಸ್ಟ್ ನ ನಿವೃತ್ತ ನಿರ್ದೇಶಕರಾದ ಪ್ರೊ.ಎ.ಎಂ.ಸುಧಾಕರ ಅವರು ಕನ್ನಡ ವಿಕಾಸ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯು ಈ ವರ್ಷದಿಂದ ಆರಂಭಿಸಿರುವ ನೃಪತುಂಗ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ವಹಿಸಿಕೊಂಡರು. ಅವರು ನೃಪತುಂಗ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿಯೂ ಕಾರ್ಯನಿರ್ವಹಿಸುತ್ತಾರೆ.
ಸಂಸ್ಥೆಯ ಆವರಣದಲ್ಲಿ ನಡೆದ ಪದಾರೋಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಪ. ಮಲ್ಲೇಶ, ಉಪಾಧ್ಯಕ್ಷರಾದ ಸ.ರ. ಸುದರ್ಶನ, ಕಾರ್ಯದರ್ಶಿಯವರಾದ ಹೆಚ್.ಜಿ ಕೃಷ್ಣಪ್ಪ ಮತ್ತು ಪಿ. ಎಂ ಸವಿತಾ ಮಲ್ಲೇಶ್, ಖಜಾಂಚಿಯವರಾದ ಎಚ್ ಟಿ ಶೈಲಜಾ, ಸಹಕಾರ್ಯದರ್ಶಿಯವರಾದ ಶೀಲಾ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಣದಲ್ಲಿ ಕನ್ನಡ ಮಾಧ್ಯಮಕ್ಕೆ ಬದ್ಧವಾಗಿರುವ ಸಂಸ್ಥೆಯು ಅದಕ್ಕೆ ಗಟ್ಟಿಯಾದ ಆರ್ಥಿಕ ನೆಲೆಯನ್ನು ಒದಗಿಸಲು ಈ ವರ್ಷದಿಂದ ಬಿಸಿಎ ಮತ್ತು ಬಿಕಾಂ ಪದವಿ ತರಗತಿಗಳನ್ನು ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಾರಂಭಿಸಿದೆ.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…