ಮೈಸೂರು: ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಈಡೇರಿಕೆಗೆ ಒತ್ತಾಯಿಸಿ ಡಿ.17ರಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದವತಿಯಿಂದ ರಾಜ್ಯಾಧ್ಯಂತ ಕಾಲೇಜುಗಳ ಬಂದ್ ಮತ್ತು ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಆರ್.ಬಾಲರಾಜ್ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜುಗಳಲ್ಲಿ ಮೂಲ ಸೌಕರ್ಯಗಳ ಕೊರತೆ, ಉಚಿತ ಬಸ ಪಾಸ್ ಸೌಕರ್ಯ, ವಿದ್ಯಾರ್ಥಿ ವೇತನ, ವಿಶ್ವವಿದ್ಯಾನಿಲಯಗಳಲ್ಲಿ ಉಪನ್ಯಾಸಕರ ಕೊರತೆ ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶಗಳನ್ನು ಸಹ ಸರಿಯಾದ ಸಮಯಕ್ಕೆ ನೀಡದೆ ಸರ್ಕಾರ ಅನ್ಯಾಯ ಮಾಡುತ್ತಿದೆ. ಸರ್ಕಾರ ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಆದ್ದರಿಂದ ಅಂದು ರಾಜ್ಯಾದ್ಯಂತ ಕಾಲೇಜುಗಳ ಬಂದ್ ಮತ್ತು ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಹೇಳಿದರು.
ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿಗಳಾದ ಮಜಿದ್ ಹಿದಾಯತ್, ಮಹದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷರುಗಳಾದ ಗೌತಮ್, ಪೂಜಾಶ್ರೀ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.…
ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: 9 ವರ್ಷಗಳ ಕಾಲ ನಡೆಸಿದ ನಿರಂತರ ಹೋರಾಟ, ಕ್ಷೇತ್ರದ ರೈತ…
ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…
ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…
ಟೆಹರಾನ್: ಇರಾನ್ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…