ಜಿಲ್ಲೆಗಳು

ಎನ್‌ಟಿಎಂ ಶಾಲೆ ಉಳಿವಿಗೆ ಮುಂದುವರಿದ ಹೋರಾಟ

ಮೈಸೂರು : ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಡಾ. ರಾಜ್‌ಕುಮಾರ್‌ ಅವರ ಪುತ್ತಳಿ ಮುಂಭಾಗ ಎನ್‌ಟಿಎಂ ಶಾಲೆಯನ್ನು ಕೆಡವಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ  ಎನ್‌ಟಿಎಂ ಶಾಲೆ ಉಳಿಸಿ ಹೋರಾಟ ಸಮಿತಿ ವತಿಯಿಂದ  ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಬಡವರ ಮಕ್ಕಳು ಕಲಿಯುತ್ತಿದ್ದ ಶಾಲೆಯನ್ನು ರಾಮಕೃಷ್ಣ ಆಶ್ರಮದವರು ಕೆಡವಿದ್ದಾರೆ. ಅದೇ ಸ್ಥಳದಲ್ಲಿ ಹೊಸದಾಗಿ ಶಾಲೆ ನಿರ್ಮಿಸುತ್ತೇವೆ ಎಂದು ಪ್ರಮುಖರ ಮುಂದೆ ಭರವಸೆ ನೀಡಿದ್ದರು. ಇದೀಗ ತಮ್ಮ ಒಪ್ಪಂದವನ್ನು ಮರೆತಿದ್ದಾರೆ. ಕೊಟ್ಟ ಮಾತನ್ನು ಉಲ್ಲಂಘಿಸಿರುವ ರಾಮಕೃಷ್ಣ ಮಠದವರು ಶಾಲೆಯನ್ನು ತೆರವುಗೊಳಿಸಿದ್ದಾರೆ. ಹೀಗಾಗಿ ಮತ್ತೆ ಶಾಲೆ ಉಳಿಸಿ ಹೋರಾಟ ಆರಂಭಿಸಲಾಗಿದೆ ಎಂದು ತಿಳಿಸಿದರು.
ಸಮಿತಿ ಸಂಚಾಲಕ ಎಂ.ಮೋಹನ್‌ಕುವಾರ್‌ಗೌಡ, ರವೀಗೌಡ, ಕೃಷ್ಣ, ರವಿ, ರಾಜ್ ಕಿಶೋರ್, ಸುರೇಶ್, ಪ್ರಕಾಶ್, , ಪಾರ್ಥಸಾರಥಿ. ಬಾಲಕಲೃಷ್ಣ ಸಂಗಾಪುರ, ಬಸವರಾಜ್, ಸ್ವಾಮಿ, ಪ್ರಕಾಶ್, ಕರಿಗೌಡ, ಹೊಸಕೋಟೆ ಬಸವರಾಜು ಮತ್ತಿತರರು ಹಾಜರಿದ್ದರು.

andolanait

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

3 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

3 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

9 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

9 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

9 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

9 hours ago