ಜಿಲ್ಲೆಗಳು

ಅ.17 ರಂದು ʼಪಂಡಿತ್‌ ರಾಜೀವ್‌ ತಾರಾನಾಥ್‌ʼ ರವರ ಜನ್ಮದಿನ ಆಚರಣೆ

ಮೈಸೂರು : ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರ 90ನೇ ವರ್ಷದ ಜನ್ಮದಿನದ ಪ್ರಯುಕ್ತ ಅ.17 ರಂದು ಸಂಜೆ 6.15 ಕ್ಕೆ  ನಗರ ಸರಸ್ವತಿಪುರಂನಲ್ಲಿರುವ ಜೆ ಎಸ್‌ ಎಸ್‌ ಮಹಿಳಾ ಕಾಲೇಜಿನಲ್ಲಿ ಹುಟ್ಡುಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರ ಕುರಿತಾದ ಗಣೇಶ್‌ ಅಮೀನ್‌ಗಡ ಹಾಗೂ ರಘುಪತಿ ತಮಣ್‌ ಕರ್‌ ಅವರ ಸಂಪಾದಕತ್ವದಲ್ಲಿ ರಚನೆಯಾದ ʼಸರೋದ್‌ ಸ್ವರಯಾನʼ ದ 2ನೇ ಮುದ್ರಣವನ್ನು ಬಿಡುಗಡೆಗೊಳಿಸಲಾಗುವುದು.


ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಕವಿ, ಕಾದಂಬರಿಕಾರ ಚಂದ್ರಶೇಖರ ಕಂಬಾರರವರು, ಉಸ್ತಾದ್‌ ಫೈಯಾಜ್‌ ಖಾನ್‌, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮನು ಬಳಿಗಾರ್‌ ಭಾಗಿಯಾಗಲಿದ್ದಾರೆ.
ಅಂದು ಪಂಡಿತ್‌ ರಾಜೀವ್‌ ತಾರಾನಾಥ್‌ ʼಎ ಲೈಫ್‌ ಇನ್‌ ಮ್ಯೂಸಿಕ್‌ʼ ಸಾಕ್ಷ್ಯಚಿತ್ರ ಹಾಗೂ ವಿಡಿಯೋ ತುಣುಕುಗಳ  ಪ್ರದರ್ಶನವಿರುತ್ತದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಬೇಕೆಂದು ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

9 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

9 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

11 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

13 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

17 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

17 hours ago