ಗುಣಮಟ್ಟದ ಆರೋಗ್ಯ ಸೇವೆ ಗುರಿ; ಸಮುದಾುಂದ ಸಹಭಾಗಿತ್ವಕ್ಕೆ ಉತ್ತೇಜನ
ಪುನೀತ್ ಮಡಿಕೇರಿ
ಹೊಸದಿಲ್ಲಿ ಆರೋಗ್ಯ ಸೇವೆಯಲ್ಲಿ ಭಾರಿ ಸದ್ದು ವಾಡಿದ ‘ಮೊಹಲ್ಲಾ ಕ್ಲಿನಿಕ್’ ವಾದರಿಯಲ್ಲಿ ರಾಜ್ಯದಲ್ಲೂ ‘ನಮ್ಮ ಕ್ಲಿನಿಕ್’ ಯೋಜನೆ ಜಾರಿಗೆ ಬಂದಿದೆ. ಕೊಡಗಿನಲ್ಲಿ ವಿರಾಜಪೇಟೆುಂಲ್ಲಿ ‘ನಮ್ಮ ಕ್ಲಿನಿಕ್’ ಅಕ್ಟೋಬರ್ ಅಂತ್ಯಕ್ಕೆ ಆರಂಭವಾಗುವ ನಿರೀಕ್ಷೆ ಇದ್ದು, ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದೆ.
ಜನ ಸಾವಾನ್ಯರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ‘ನಮ್ಮ ಕ್ಲಿನಿಕ್’ ಯೋಜನೆ ಘೋಷಿಸಿತ್ತು. ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆ ಮುಖ್ಯಮಂತ್ರಿ ಬಸವರಾಜ ಬೊವ್ಮಾಯಿ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಜು. ೨೮ರಿಂದ ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಆರಂಭವಾಗಿದೆ.
ಬೆಂಗಳೂರಿನ ಎಲ್ಲ ೨೪೩ ವಾರ್ಡ್ ಮತ್ತು ಇತರ ಜಿಲ್ಲೆಗಳ ೧೯೫ ಸ್ಥಳ ಸೇರಿದಂತೆ ರಾಜ್ಯದ ಒಟ್ಟು ೪೩೮ ಕಡೆ ‘ನಮ್ಮ ಕ್ಲಿನಿಕ್’ ಆರಂಭಿಸುವ ಬಗ್ಗೆ ೨೦೨೨-೨೩ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಘೋಷಿಸಿದ್ದರು. ಅದರಂತೆ ವಿರಾಜಪೇಟೆುಂಲ್ಲೂ ‘ನಮ್ಮ ಕ್ಲಿನಿಕ್’ ಆರಂಭಕ್ಕೆ ಸಿದ್ಧತೆ ನಡೆದಿದೆ.
ನಮ್ಮ ಕ್ಲಿನಿಕ್ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊರತಾಗಿ ನಗರ, ಪಟ್ಟಣಗಳ ವಾರ್ಡ್ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುವ ಕೇಂದ್ರವಾಗಿದ್ದು, ಸರ್ಕಾರಿ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆ ವಾಡಲು ಹಾಗೂ ಜನರಿಗೆ ಸ್ಥಳೀಯವಾಗಿಯೂ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಿಸಲಾಗುತ್ತಿದೆ.
ವಿಕೇಂದ್ರಿಕೃತ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸಲು ಮತ್ತು ಸುಧಾರಿತ ಸಮುದಾಯ ಆರೋಗ್ಯ ಪ್ರಕ್ರಿಯೆಗಳು ಕೊಳಗೇರಿ ಮತ್ತು ಕೊಳಗೇರಿ ಸ್ವರೂಪದ ಪ್ರದೇಶಗಳಲ್ಲಿ ವಿಶೇಷವಾಗಿ ನೀಡಲು, ದುರ್ಬಲ ವರ್ಗದ ಜನಸಂಖ್ಯೆ ಇರುವ ಪ್ರದೇಶದಲ್ಲಿ ಆರೋಗ್ಯ ಸೇವೆಗಾಗಿ, ಸಾರ್ವಜನಿಕ ಆರೋಗ್ಯದ ಮೇಲೆ ಕಣ್ಗಾವಲು ಇಡಲು, ಸಮುದಾಯದ ಸಹಭಾಗಿತ್ವ ಉತ್ತೇಜಿಸಲು ಹಾಗೂ ಆರೋಗ್ಯ ಸೇವೆಗಳು ಸಮರ್ಪಕವಾಗಿ ಸಾರ್ವಜನಿಕರಿಗೆ ತಲುಪಿಸಲು ‘ನಮ್ಮ ಕ್ಲಿನಿಕ್’ ಬಳಸಿಕೊಳ್ಳಲಾಗುತ್ತದೆ.
ನಮ್ಮ ಕ್ಲಿನಿಕ್‌ಗಳ ನಿರ್ವಹಣೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ವಾರ್ಷಿಕ ೩೬.೪೫ ಲಕ್ಷ ರೂ. ಮತ್ತು ಇತರ ಕಡೆಗಳಲ್ಲಿ ೩೪.೪೬ ರೂ. ಅಂದಾಜು ವೆಚ್ಚ ಆಗಲಿದೆ. ಈ ಮೊತ್ತದಲ್ಲಿ ಸಿಬ್ಬಂದಿ ವೇತನ, ಕ್ಲಿನಿಕ್ ನಿರ್ವಹಣೆ, ಖಾಸಗಿ ಕಟ್ಟಡವಾಗಿದ್ದರೆ ಬಾಡಿಗೆ ಸೇರಿದಂತೆ ಎಲ್ಲವನ್ನೂ ನಿರ್ವಹಣೆ ವಾಡಬೇಕು. ನಮ್ಮ ಕ್ಲಿನಿಕ್‌ಗೆ ಬೇಕಾದ ಅನುದಾನವನ್ನು ರಾಜ್ಯ ಸರ್ಕಾರ ಈಗಾಗಲೇ ಬಿಡುಗಡೆ ವಾಡಿದೆ..
ಹೇಗಿರಲಿದೆ ‘ನಮ್ಮ ಕ್ಲಿನಿಕ್’?
ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪.೩೦ರವರೆಗೆ ನಮ್ಮ ಕ್ಲಿನಿಕ್ ತೆರೆದಿರುತ್ತದೆ. ಒಬ್ಬರು ವೈದ್ಯ, ಒಬ್ಬ ನರ್ಸ್, ಒಬ್ಬ ಲ್ಯಾಬ್ ಟೆಕ್ನೀಷಿುಂನ್, ಹಾಗೂ ಒಬ್ಬ ಡಿ ಗ್ರೂಪ್ ಸಿಬ್ಬಂದಿ ಇಲ್ಲಿ ಇರುತ್ತಾರೆ. ಉಚಿತ ತಪಾಸಣೆ ಮತ್ತು ಉಚಿತ ಔಷಧ ವಿತರಣೆ ಸೌಲಭ್ಯ ವ್ಯವಸ್ಥೆ ವಾಡಲಾಗಿದೆ. ಒಟ್ಟು ೧೨ ರೀತಿಯ ಆರೋಗ್ಯ ಸೇವೆಗಳು ಮತ್ತು ೧೪ ವಿಧದ ಪ್ರಯೋಗ ನಡೆಸಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಬೇಕಿದ್ದರೆ ಇ-ಸಂಜೀವಿನಿ ಮತ್ತು ಟೆಲಿ ಕೌನ್ಸೆಲಿಂಗ್ ವ್ಯವಸ್ಥೆಯು ಇರುತ್ತದೆ.
ರಾಜ್ಯದಲ್ಲಿ ಒಟ್ಟು ೪೩೮ ನಮ್ಮ ಕ್ಲಿನಿಕ್‌ಗಳು ಆರಂಭವಾಗುತ್ತಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ೨೪೩ ಮತ್ತು ಇತರ ಜಿಲ್ಲೆಗಳಲ್ಲಿ ೧೯೫ ಕ್ಲಿನಿಕ್‌ಗಳನ್ನು ತೆರೆಯ ಲಾಗುವುದು.
–ಡಾ.ಕೆ.ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ
ವಿರಾಜಪೇಟೆ ನಮ್ಮ ಕ್ಲಿನಿಕ್‌ಗೆ ಎಂಬಿಬಿಎಸ್ ವೈದ್ಯರೊಬ್ಬರು ಅಂತಿಮಗೊಳ್ಳಬೇಕಿದೆ. ಉಳಿದ ಸಿಬ್ಬಂದಿ ನೇಮಕ ಆಗಿದ್ದಾರೆ. ಬಹುತೇಕ ಈ ತಿಂಗಳಾಂತ್ಯಕ್ಕೆ ಅಲ್ಲಿ ‘ನಮ್ಮ ಕ್ಲಿನಿಕ್’ ಆರಂಭವಾಗಲಿದೆ.
–ಡಾ.ವೆಂಕಟೇಶ್, ಜಿಲ್ಲಾ ಆರೋಗ್ಯಾಧಿಕಾರಿ
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…