ಹನೂರು: ಒಡೆಯರಪಾಳ್ಯ ಕೆರೆ ಒತ್ತುವರಿ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ತಾಪಂ ಇಒ ಶ್ರೀನಿವಾಸ್ ಕ್ರಮ ಕೈಗೊಳ್ಳಲಿದ್ದಾರೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಡಾ.ಬಾಬು ಜಗಜೀವನ್ ರಾಂ ಸಮುದಾಯ ಭವನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಆರ್ ನರೇಂದ್ರ ಒಡೆಯರಪಾಳ್ಯ ಗ್ರಾಮದಲ್ಲಿ ಕೆರೆ ಒತ್ತುವರಿಯಾಗಿರುವ ಸಂಬಂಧ ಹಿಂದಿನ ಜಿಲ್ಲಾಧಿಕಾರಿಗಳು ಸರ್ವೆ ನಡೆಸಿ ವರದಿ ಪಡೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣನವರು ಸಹ ಕೆರೆ ಒತ್ತುವರಿಯಾಗಿದ್ದರೆ ಕಾನೂನಿನಡಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಇವರ ಸೂಚನೆ ಮೇರೆಗೆ ತಾಪಂ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಮಳಿಗೆ ಮಾಲೀಕರಿಗೆ 2ನೋಟಿಸ್ ನೀಡಿದ್ದಾರೆ ಅಂತಿಮ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಾಧ್ಯಮಕ್ಕೆ ಸ್ಪಷ್ಟಪಡಿಸಿದರು.