ಜಿಲ್ಲೆಗಳು

ಒಕ್ಕಲಿಗರ ಕೋಟೆಗೆ ಲಗ್ಗೆ ಹಾಕಲು ಅಮಿತ್‌ ಷಾ ರಣತಂತ್ರ

ಬೆಂಗಳೂರು: ಹಳೆ ಮೈಸೂರು ಪ್ರದೇಶವನ್ನು ಗೆದ್ದರೆ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಬಹುದು ಎಂಬ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಈ ಭಾಗದ ಪ್ರಮುಖರ ಸಭೆ ನಡೆಸಿ ಒಕ್ಕಲಿಗರ ಕೋಟೆಗೆ ಲಗ್ಗೆ ಹಾಕಲು ರಣ ತಂತ್ರ ರೂಪಿಸಿದ್ಸಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ‘ಮಿಷನ್ 150’ ಕಾರ್ಯಗತಗೊಳಿಸುವ ಉದ್ದೇಶದಿಂದ ಪಕ್ಷ ಸಂಘಟನೆ ದುರ್ಬಲವಾಗಿರುವ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಲು ತಂತ್ರ ರೂಪಿಸಿರುವ ಆಡಳಿತಾರೂಢ ಬಿಜೆಪಿ, ಆ ಭಾಗದ ಶಾಸಕರಿಗೆ ‘1+1’ ಸೂತ್ರದ ಗುರಿ ನೀಡಿದೆ.
ಶುಕ್ರವಾರ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಳೆ ಮೈಸೂರು ಭಾಗದ ಸಚಿವರು, ಶಾಸಕರು ಸೇರಿದಂತೆ ಪಕ್ಷದ ಪ್ರಮುಖರ ಜೊತೆಗೆ ರಹಸ್ಯ ಸಭೆ ನಡೆಸಿ ಈ ಭಾಗದ ರಾಜಕೀಯ ಸ್ಥಿತಿಗತಿ, ಜಾತಿ ಸಮೀಕರಣ, ಜೆಡಿಎಸ್ – ಕಾಂಗ್ರೆಸ್ ಗೆ ಪೂರಕವಾದ ಅಂಶಗಳು, ಬಿಜೆಪಿ ಸಂಘಟನೆಗೆ ಹಿನ್ನಡೆಯಾಗಲು ಕಾರಣಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ಪಕ್ಷದ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ , ,ಸಚಿವರಾದ ಎಸ್.ಟಿ.ಸೋಮಶೇಖರ್, ಸೋಮಣ್ಣ, ಸುಧಾಕರ್, ಮುನಿರತ್ನ, ಡಾ.ಅಶ್ವಥ್ ನಾರಾಯಣ, ಕೆ. ಗೋಪಾಲಯ್ಯ, ಶಾಸಕರಾದ ಪ್ರೀತಂಗೌಡ, ನಾಗೇಂದ್ರ, ರಾಮದಾಸ್, ನಿರಂಜನ್ ಕುಮಾರ್, ಹರ್ಷವರ್ಧನನ, ಎನ್ ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ.ಯೋಗೀಶ್ವರ, ವೈ.ಎ.ನಾರಾಯಣಸ್ವಾಮಿ, ಛಲವಾದಿ ನಾರಾಯಣಸ್ವಾಮಿ.,ಸೇರಿದಂತೆ ಜಿಲ್ಲಾಧ್ತಕ್ಷರು, ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು.
ಬೆಂಗಳೂರು ಹೊರತುಪಡಿಸಿ ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಪಕ್ಷವನ್ನು ಮತ್ತಷ್ಟು ಸದೃಡಗೊಳಿಸಲು ಸ್ಥಳೀಯ ನಾಯಕರಿಗೆ ಅಮಿತ್ ಷಾ ಸೂಚನೆ ನೀಡಿದ್ದಾರೆ.
ಈ ‘1+1’ ಸೂತ್ರದ ಅನುಸಾರ ಹಳೆ ಮೈಸೂರು ಭಾಗದ ಹಾಲಿ ಶಾಸಕರು ತಾವು ಗೆಲ್ಲುವುದರ ಜತೆಗೆ ಮತ್ತೊಂದು ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಿಕೊಡುವ ಹೊಣೆ ಹೊರಬೇಕು. ತಾವು ಗೆಲ್ಲಿಸಿಕೊಡುವ ಕ್ಷೇತ್ರ ಯಾವುದು ಎಂಬುದರ ಹೆಸರನ್ನು ಶೀಘ್ರದಲ್ಲೇ ಪಕ್ಷದ ವರಿಷ್ಠರಿಗೆ ನೀಡಬೇಕು. ಜತೆಗೆ ತಕ್ಷಣದಿಂದಲೇ ಆ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಲಗೊಳಿಸುವ ಕೆಲಸ ಆರಂಭಿಸಬೇಕು. ಇದಕ್ಕೆ ಅಗತ್ಯವಾದ ಸಹಕಾರವನ್ನು ಪಕ್ಷದ ವತಿಯಿಂದ ನೀಡಲಾಗುವುದು ಎಂದು ಸೂಚಿಸಲಾಗಿದೆ.
ಶಾಸಕರು ತಮ್ಮ ಪಕ್ಕದ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಂಡು ಗೆಲ್ಲಿಸಬೇಕು ಎಂದೇನೂ ಇಲ್ಲ. ಬೆಂಗಳೂರಿನ ಶಾಸಕರು ಚಾಮರಾಜನಗರ, ಹಾಸನ, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪೈಕಿ ಯಾವುದಾದರೊಂದು ಕ್ಷೇತ್ರ ಆಯ್ಕೆ ಮಾಡಿಕೊಳ್ಳಬಹುದು. ಅದೇ ರೀತಿ ಹೊರ ಜಿಲ್ಲೆಯವರು ಬೆಂಗಳೂರು ಅಥವಾ ಸುತ್ತಮುತ್ತಲಿನ ಕ್ಷೇತ್ರವನ್ನು ಗೆಲ್ಲಿಸುವ ಜವಾಬ್ದಾರಿ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಎರಡು ಹಂತದ ಸರ್ವೇಗಳು ನಡೆದಿದ್ದು, ರಾಜ್ಯದ ಸ್ಥಿತಿಗತಿಯ ಬಗ್ಗೆ ಶಾ ಮಾಹಿತಿ ಪಡೆದುಕೊಂಡಿದ್ದಾರೆ. ಆಂತರಿಕ ಸಮೀಕ್ಷೆಗಳಲ್ಲಿ ಬಿಜೆಪಿಗೆ ದೊಡ್ಡ ಭರವಸೆ ಸಿಗದ ಹಿನ್ನಲೆಯಲ್ಲಿ ಅಗತ್ಯ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಟಾರ್ಗೆಟ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಗೆ ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ನೆಲೆ ಇಲ್ಲ ಎಂಬುದನ್ನು ಹುಸಿಗೊಳಿಸಿ, ಈ ಭಾಗದಲ್ಲೂ ಪಕ್ಷದ ಅಧಿಪತ್ಯವನ್ನು ಸ್ಥಾಪಿಸಲು ಅಮಿತ್ ರಣತಂತ್ರವನ್ನು ರೂಪಿಸಿದ್ದು, ಅದರ ಭಾಗವಾಗಿ ಮಂಡ್ಯ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಸಮಾವೇಶ ನಡೆಸುವ ಮೂಲಕ ಪಕ್ಷವನ್ನು ಬಲಪಡಿಸಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿಯನ್ನು ಸಾಧಿಸಲು ಮಂಡ್ಯದಲ್ಲಿ ಬಿಜೆಪಿಯ ಸಮಾವೇಶ ನಡೆಸಿ ಪಕ್ಷದ ವಿರಾಟ್ ಶಕ್ತಿಯ ಅನಾವರಣದ ಪ್ರಯತ್ನ ನಡೆದಿದೆ.
ಸರಣಿ ಸಭೆ
ಚುನಾವಣೆಗೆ ಕೆಲ ತಿಂಗಳುಗಳಷ್ಟೆ ಬಾಕಿ ಇರುವ ಬೆನ್ನಲ್ಲೆ ಚಾಣಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿರುವುದು ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದು, ಪಕ್ಷದ ಪ್ರಮುಖ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರ ಸರಣಿ ಸಭೆಗಳನ್ನು ನಡೆಸಿ ಚುನಾವಣೆಗೆ ಪಕ್ಷವನ್ನು ಸನ್ನದ್ಧಗೊಳಿಸುವ ಕಾರ್ಯ ನಡೆಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಹಾಗೂ ಇತರ ಭಾಗಗಳಲ್ಲಿ ಜೆಡಿಎಸ್ ಪ್ರಾಬಲ್ಯವಿದೆ. ಈ ಸ್ಥಾನಗಳು ಕಾಂಗ್ರೆಸ್ ಪಾಲಾಗದಂತೆ ನೋಡಿಕೊಳ್ಳಲು ಬಿಜೆಪಿ ಕಸರತ್ತು ನಡೆಸಿದೆ.ಹಳೆ ಮೈಸೂರು ಭಾಗದಲ್ಲಿ ಅಭಿವೃದ್ಧಿಯ ಜತೆಗ ಹಿಂದುತ್ವದ ಮಂತ್ರವನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಬೆಂಗಳೂರು-ಮೈಸೂರು ಹೆದ್ದಾರಿ ಯೋಜನೆ, ಹಾಲು ಉತ್ಪಾದಕರಿಗೆ ಸಹಾಯಧನ, ಮೈಸೂರು, ಹಾಸನ ವಿಮಾನನಿಲ್ದಾಣ ಮತ್ತು ಈ ಭಾಗದ ರೈಲ್ವೆ ಯೋಜನೆಗಳನ್ನು ಮುಖ್ಯವಾಗಿ ಪ್ರಸ್ತಾಪಿಸಲು ನಿರ್ಧರಿಸಲಾಗಿದ್ದು, ಟಿಪ್ಪುಸುಲ್ತಾನ್, ಶ್ರೀರಂಗಪಟ್ಟಣ ಮಸೀದಿ, ರಾಮದೇವರ ಬೆಟ್ಟ ಅಭಿವೃದ್ಧಿ ಯೋಜನೆಗಳನ್ನು ಬಳಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.
ಅಮಿತ್ ಶಾ, ಬೆಳಿಗ್ಗೆ ತಾವು ವಾಸ್ತವ್ಯ ಹೂಡಿರುವ ಖಾಸಗಿ ತಾರಾ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರೊಂದಿಗೆ ಇಂದು ಬೆಳಿಗ್ಗೆಯೇ ಸಭೆ ನಡೆಸಿ ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸಲು ಏನೆಲ್ಲ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಿದರು.
ಪ್ರಮುಖರ ಸಭೆಯಲ್ಲಿ ರಾಜಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಸರ್ಕಾರದ ಕೆಲಸ ಕಾರ್ಯಗಳು, ಮೀಸಲಾತಿ, ಕಳಸಾ ಬಂಡೂರಿ ಸೇರಿದಂತೆ ಪ್ರಮುಖ ಘೋಷಣೆಗಳು ಹಾಗೂ ಅದರಿಂದಾಗುವ ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಮಿತ್ ಶಾಗೆ ಮಾಹಿತಿ ನೀಡಿದ್ದಾರೆ. ಇನ್ನು ಪಕ್ಷದ ತಯಾರಿ, ತಳಮಟ್ಟದಲ್ಲಿ ನಡೆಯತ್ತಿರುವ ಸಿದ್ಧತೆಗಳ ಬಗ್ಗೆ ಷಾ ಮಾಹಿತಿ ನೀಡಿದರು. ರಾಜ್ಯ ಸರ್ಕಾರದ ಬಗ್ಗೆ ಕೇಳಿ ಬಂದಿರುವ ಆರೋಪಗಳು, 40% ಭ್ರಷ್ಟಾಚಾರ ಆರೋಪ, ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಹಿನ್ನಡೆಯಿಂದ ವರ್ಚಸ್ಸು ಕುಗ್ಗಿದ್ದು, ಇದನ್ನು ಹೇಗೆ ಸರಿಪಡಿಸಬಹುದು ಎಂಬ ನಿಟ್ಟಿನಲ್ಲಿಯೂ ಅಮಿತ್ ಶಾ ರಾಜ್ಯ ಮುಖಂಡರಿಗೆ ಸಲಹೆಗಳನ್ನು ಕೊಟ್ಟಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago