ಮೈಸೂರು: ಬರುವ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.೧೨ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಒಕ್ಕಲಿಗರ ಮಹಾ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ಅವರು ಇಂದು ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು ನಗರಗಳು ಬೆಳೆದಂತೆ ನಗರಗಳ ಆಸುಪಾಸಿನ ಒಕ್ಕಲಿಗರು ನಗರದ ಅಭಿವೃದ್ಧಿಗಾಗಿ ಭೂಮಿಯನ್ನು ಕಳೆದುಕೊಂಡು ಉದ್ಯೋಗ ಅರಸಿ ನಗರಕ್ಕೆ ವಲಸೆ ಬರುತ್ತಿದ್ದಾರೆ. ಕೂಲಿ ಕೆಲಸ, ಸೆಕ್ಯೂರಿಟಿ ಕೆಲಸಕ್ಕಾಗಿ ಬಂದು ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಮೀಸಲಾತಿ ಹಂಚಿಕೆಯಲ್ಲಿ ಬೇರಾವುದೇ ಸಮುದಾಯಗಳ ನಗರವಾಸಿಗಳಿಗೆ ಇಲ್ಲದ ಮಿತಿ ಒಕ್ಕಲಿಗರಿಗೆ ಬಂದಿದ್ದಾದರೂ ಏಕೆ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದ್ದು, ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ದಶಕಗಳಿಂದ ಸರ್ಕಾರಗಳ ಗಮ ಸೆಳೆಯುತ್ತಾ ಬಂದಿದ್ದರೂ ಸರ್ಕಾರಗಳು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಮುಂದಾಗಿಲ್ಲ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಿ.ಮರಿಸ್ವಾಮಿ, ಉಪಾಧ್ಯಕ್ಷ ಆರ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಇ.ಚೇತನ್, ಪದಾಧಿಕಾರಿಗಳಾದ ಗಂಗಾಧರ್, ಸಂತೋಷ್, ಯಮುನಾ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…
ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…
ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…
ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…
ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ಜಾಯ್ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…