ಹನೂರು : ಕಡೇ ಕಾರ್ತಿಕ ಸೋಮವಾರವಾದ (ಇಂದು) ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಜರುಗುವ ಶ್ರೀ ಮಹದೇಶ್ವರರ ಮಹಾಜ್ಯೋತಿ ದರ್ಶನಕ್ಕೆ (ದೀಪೋತ್ಸವ) ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆಗಳು ಜರುಗಿದೆ.
ಮ.ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರ ಸ್ವಾಮಿಗೆ ವಿಶೇಷ ಪೂಜೆ ಸಂಪ್ರದಾಯದಂತೆ ವಿಧಿ ವಿಧಾನಗಳೊಂದಿಗೆ ಮುಂಜಾನೆ ಯಿಂದಲೇ ಜರುಗಿದೆ. ಇದರ ಜೊತೆಗೆ ಸಂಜೆ ಮಹದೇಶ್ವರರ ಮಹಾಜ್ಯೋತಿ ದರ್ಶನವು (ದೀಪೋತ್ಸವ) ಸಾವಿರಾರು ಭಕ್ತರ ಸಮುಖದಲ್ಲಿ ನೆರವೇರಲಿದೆ. ಈ ದಿಸೆಯಲ್ಲಿ ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಲಿದ್ದು, ಪ್ರಾಧಿಕಾರದ ವತಿಯಿಂದ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಶೌಚಗೃಹ ಹಾಗೂ ದಾಸೋಹ ವ್ಯವಸ್ಥೆ ಮಾಡಲಾಗಿದ್ದು, ಸೂಕ್ತ ಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ದೇಗುಲವನ್ನು ವಿವಿಧ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿದೆ.
ದೀಪೋತ್ಸವಕ್ಕೆ ಸಿದ್ಧತೆ: ಸೋಮವಾರ ಸಂಜೆ ನಡೆಯುವ ದೀಪೋತ್ಸವದ ಹಿನ್ನಲೆ ದೀಪದಗಿರಿ ಒಡ್ಡುವಿನ ಬಳಿ ಅಳವಡಿಸಲಾಗಿರುವ ಬೃಹತ್ ಅಣತೆಗೆ ಬಿಳಿ ಬಣ್ಣವನ್ನು ಬಳಿಯಲಾಗಿದೆಯಲ್ಲದೇ ಚಪ್ಪರವನ್ನು ನಿರ್ಮಿಸಿ ತಳೀರು ತೋರಣಗಳಿಂದ ಸಿಂಗಾರ ಮಾಡಲಾಗಿದೆ. ದೀಪೋತ್ಸವದ ವೇಳೆ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುವುದರಿಂದ ಈ ಮಾರ್ಗದ ರಸ್ತೆಯನ್ನು ದುರಸ್ತಿಪಡಿಸಲಾಗಿದ್ದು, ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆಗಳು ನಡೆದಿದೆ.
ಮಹಾಜ್ಯೋತಿಯ ದರ್ಶನ: ಇಂದು ಸಂಜೆ ದೇಗುಲದಲ್ಲಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿರುವ ಬಸವ ವಾಹನದಲ್ಲಿ ಕುಳ್ಳರಿಸಿ ಸತ್ತಿಗೆ, ಸೂರಿಪಾನಿ, ಜಾಗಟೆ ಹಾಗೂ ವಾದ್ಯ ಮೇಳದೊಂದಿಗೆ ದೇಗುಲದ ಸುತ್ತ ಪ್ರದಕ್ಷಿಣೆ ಹಾಕುವ ಮೂಲಕ ಉತ್ಸವವನ್ನು ನೆರವೇರಿಸಲಾಗುತ್ತದೆ. ನೈವೇದ್ಯ ಹಾಗೂ ಮಂಗಳಾರತಿ ಬೆಳಗಿದ ನಂತರ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ದೀಪದಗಿರಿ ಒಡ್ಡುಗೆ ಕೊಂಡೋಯ್ಯಲಾಗುತ್ತದೆ. ಈ ವೇಳೆ ಸ್ವಾಮಿಗೆ ಬಿಲ್ವಾರ್ಚನೆ, ದೀವಾಟಿಕೆ ಸೇವೆ ಹಾಗೂ ಧೂಪ ದೀಪಧಾರತಿ ಸೇವೆ ನೆರವೇರಿಸುವುದರ ಮೂಲಕ ವಿಶೇಷ ಪೂಜೆ ಸಲ್ಲಿಸಿ ಮಹಾಜ್ಯೋತಿಯನ್ನು ಬೆಳಗಿಸಲಾಗುತ್ತದೆ. ಬಳಿಕ ದೇಗುಲಕ್ಕೆ ತೆರಳಿ ಸ್ವಾಮಿಗೆ ನೈವೇದ್ಯ ಅರ್ಪಿಸಿ ಕಾರ್ತಿಕ ಮಾಸದ ಪೂಜೆಯನ್ನು ನೆರವೇರಿಸಿದ ಬಳಿಕ ಭಕ್ತರಿಗೆ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಗುತ್ತದೆ.
ಕ್ಷೇತ್ರದಲ್ಲಿ ಬೀಡು ಬಿಟ್ಟಿರುವ ಭಕ್ತರು: ಕಡೇ ಕಾರ್ತಿಕ ಸೋಮವಾರದಂದು ಮ.ಬೆಟ್ಟದಲ್ಲಿ ನಡೆಯುವ ವಿಶೇಷ ಪೂಜೆ, ಮಹಾಜ್ಯೋತಿ ದರ್ಶನ ಹಾಗೂ ತೆಪ್ಪೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಈಗಾಗಲೇ ಸಾವಿರಾರು ಭಕ್ತರು ಕಾಲ್ನಡಿಗೆಯಲ್ಲಿ ತೆರಳಿ ಮ.ಬೆಟ್ಟದಲ್ಲಿ ಬೀಡು ಬಿಟ್ಟಿದ್ದಾರೆ.
1.5 ಲಕ್ಷ ಲಾಡು ಸಿದ್ದ: ಮ.ಬೆಟ್ಟದಲ್ಲಿ ಪ್ರಸಾದದ ರೂಪದಲ್ಲಿ ಲಾಡು ವಿತರಣೆ ಮಾಡಲಾಗುತ್ತದೆ. ಪ್ರತಿ ಲಾಡಿಗೆ 25ರೂ ದರ ನಿಗಧಿ ಮಾಡಲಾಗಿದೆ. ಇಲ್ಲಿಗೆ ಆಗಮಿಸುವ ಬಹುತೆಕ ಭಕ್ತರು ಲಾಡನ್ನು ಪಡೆಯದೇ ಹಿಂತಿರುಗುವುದಿಲ್ಲ. ಆಗಾಗಿ ಲಾಡಿಗೆ ಹೆಚ್ಚಿನ ಬೇಡಿಕೆ ಇದೆ. ಈ ದಿಸೆಯಲ್ಲಿ ಸೋಮವಾರ ಸಾವಿರಾರು ಭಕ್ತರು ಆಗಮಿಸುವುದರಿಂದ ಈಗಾಗಲೇ 1.5 ಲಕ್ಷ ಲಾಡನ್ನು ತಯಾರಿಸಲಾಗಿದೆ. ಅಲ್ಲದೇ ಬೇಡಿಕೆಗೆ ಅನುಗುಣವಾಗಿ ಅಗತ್ಯವಿದ್ದಲ್ಲಿ ಇನ್ನು ಹೆಚ್ಚಿನ ಲಾಡನ್ನು ತಯಾರಿಸಲು ಪ್ರಾಧಿಕಾರ ಅಗತ್ಯ ಕ್ರಮಕೈಗೊಂಡಿದೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…