ಜಿಲ್ಲೆಗಳು

ಕೇವಲ ಆಹ್ವಾನ ಪತ್ರಿಕೆಯಲ್ಲಷ್ಟೇ ಅಧ್ಯಕ್ಷತೆ ವಹಿಸುವಂತಾದ ಜಿಟಿಡಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಇಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ನಡೆದ ನಾಡಹಬ್ಬ ದಸರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಜಿ.ಟಿ.ದೇವೇಗೌಡ ಅವರೇ ವೇದಿಕೆ ಕೆಳಗಡೆ ಕುಳಿತು ಕಾರ್ಯಕ್ರಮ ವೀಕ್ಷಿಸುವಂತಹ ಪ್ರಸಂಗ ನಿರ್ಮಾಣವಾಯಿತು.
ರಾಜ್ಯ ಸರ್ಕಾರ ಮುದ್ರಿಸಿದ್ದ ದಸರಾ ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಅಧ್ಯಕ್ಷತೆ ವಹಿ ಸಲಿದ್ದಾರೆ ಎಂದು ಹೇಳಲಾಗಿತ್ತು. ಅದೇ ರೀತಿ ಶಾಸಕ ಜಿ.ಟಿ.ದೇವೇಗೌಡ ಅವರು ೯.೩೦ಕ್ಕೆ ಆಗಮಿಸಿ ವೇದಿಕೆಯನ್ನೇರಿದರಲ್ಲದೆ ಉತ್ಸವ ಮೂರ್ತಿಗೆ ಕೈಮುಗಿಯುವ ಜತೆಗೆ ಸಭಿಕರತ್ತ ಕೈ ಬೀಸಿ ವಾಪಸ್ ದೇವಸ್ಥಾನಕ್ಕೆ ತೆರಳಿದ್ದರು. ರಾಷ್ಟ್ರಪತಿಗಳ ಜತೆಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರ ಬರುತ್ತಿದ್ದಂತೆ ವೇದಿಕೆಯಲ್ಲಿ ಅವಕಾಶವಿಲ್ಲವೆಂದು ಮಾಹಿತಿ ತಲುಪಿತು. ಇದರಿಂದಾಗಿ ಬೇಸರದಿಂದಲೇ ಶಾಸಕರ ಗ್ಯಾಲರಿಯತ್ತ ಆಗಮಿಸಿ ಕುಳಿತರು.
ಶಾಸಕರಿಗೂ ಅವಕಾಶವಿಲ್ಲವೆಂದ ಕಾರಣ ಇಲ್ಲಿಗೆ ಬಂದು ಕುಳಿತಿದ್ದೇನೆ ಎಂದು ಜಿ.ಟಿ.ದೇವೇಗೌಡ ಅವರು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಬೇಕಿದ್ದ ಜಿ.ಟಿ.ದೇವೇಗೌಡ ಅವರೇ ವೇದಿಕೆಯಲ್ಲಿ ಇಲ್ಲದ ಕಾರಣ ಯಾರೂ ಅಧ್ಯಕ್ಷತೆ ವಹಿಸಲಿಲ್ಲ. ಪ್ರಾಸ್ತಾವಿಕವಾಗಿ ಮಾತನ್ನಾಡಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ವಾಗತ ಭಾಷಣಕ್ಕೆ ಸೀಮಿತವಾದರು.

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

9 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

9 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

9 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

10 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

10 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

10 hours ago