ಮೈಸೂರು: ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಸುತ್ತಮುತ್ತ 10ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಗುರುವಾರ ಕಾರ್ಯಾಚರಣೆ ಆರಂಭಿಸಿದೆ.
ಗ್ರಾಮಸ್ಥರು ನೀಡಿದ ದೂರುಗಳ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗುರುವಾರ ಮುಂಜಾನೆ ಐದು ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದೆ. ಮತ್ತಿಗೋಡು ಆನೆ ಶಿಬಿರದ ಭೀಮ ಆನೆ ಸಹಾಯದಿಂದ ಬಿಆರ್ ಕಾವಲು, ಶೆಟ್ಟಿಹಳ್ಳಿ ಅರಣ್ಯ ಮತ್ತು ತೋಟಗಳ ಸುತ್ತಮುತ್ತ ಶೋಧ ಕಾರ್ಯಾಚರಣೆ ಪ್ರಾರಂಭವಾಗಿದೆ.
ಕಾರ್ಯಾಚರಣೆಯ ನಡುವೆಯೇ ಹುಲಿಯು ಹೆಮ್ಮಿಗೆ ಹಾಡಿಯ ತಾಯಮ್ಮ ಅವರಿಗೆ ಸೇರಿದ ಹಸುವನ್ನು ಎಳೆದುಕೊಂಡು ಹೋಗಿ ತಿಂದಿರುವ ಘಟನೆಯೂ ನಡೆದಿದೆ. ಈ ಭಾಗದಲ್ಲಿ ಬೆಳಗ್ಗೆ 10 ಗಂಟೆವರೆಗೂ ಹುಲಿಗಾಗಿ ಹುಡುಕಾಟ ನಡೆಸಿದರೂ ಹುಲಿ ಪತ್ತೆಯಾಗಿಲ್ಲ.
ಕೆಲ ದಿನಗಳ ಹಿಂದೆ ಹನಗೋಡು, ಅಬ್ಬೂರು, ಸಿಂಡೆನಹಳ್ಳಿ, ಹೆಮ್ಮಿಗೆ ಗ್ರಾಮಗಳಲ್ಲಿ ಈ ಹುಲಿ ಹತ್ತಕ್ಕೂ ಹೆಚ್ಚು ಹಸುಗಳನ್ನು ಕೊಂದು ಹಾಕಿದೆ. ಹುಲಿಯನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಈ ಸ್ಥಳದಲ್ಲಿ ಬೋನು ಇಟ್ಟಿದ್ದರೂ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಗ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ.
ಹುಲಿ ಕಾಣಿಸಿಕೊಂಡಿರುವ ವಿವಿಧೆಡೆ ಅತ್ಯಾಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, 11 ಮಂದಿ ಅರಣ್ಯ ಸಿಬ್ಬಂದಿ ಮರದ ತುದಿಯಿಂದ ಹುಲಿಯ ಚಲನವಲನದ ಮೇಲೆ ನಿಗಾ ಇಡಲು ಆರಂಭಿಸಿದ್ದಾರೆ.
ವಿಶೇಷ ಕಾರ್ಯಪಡೆಯ ನಾಲ್ಕು ಆನೆಗಳನ್ನೂ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದೆ. ಆನೆ ಕಾರ್ಯಪಡೆಯ ಎಂಟು ಮಂದಿ ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಹುಲಿ ಸೆರೆ ಕಾರ್ಯಾಚರಣೆಗೆ ಸಹಕರಿಸುತ್ತಿದ್ದಾರೆ. ಡಿಸಿಎಫ್ ಡಾ.ಹರ್ಷವರ್ದನ್ ಮಾರ್ಗದರ್ಶನದಲ್ಲಿ ಎಸಿಎಫ್ ಧನಂಜಯ್, ಆರ್ ಎಫ್ ಒ ರತನ್ ಹಾಗೂ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಡಿಸಿಎಫ್ ಡಾ ಹರ್ಷವರ್ಧನ್ ಮಾತನಾಡಿ ಹುಲಿಯಿಂದ ಜಾನುವಾರುಗಳನ್ನು ಕಳೆದುಕೊಂಡವರಿಗೆ ಹೆಚ್ಚಿನ ಪರಿಹಾರ ನೀಡಲು ಉನ್ನತ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ” ಈ ಪ್ರದೇಶದದಲ್ಲಿ ಹುಲಿ ಓಡಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು, ಪಗ್ ಗುರುತುಗಳೂ ಪತ್ತೆಯಾಗಿವೆ. ಅಕ್ಕಪಕ್ಕದ ಎಸ್ಟೇಟ್ ಗಳಲ್ಲಿ ಕ್ಯಾಮೆರಾ ಅಳವಡಿಸಿದ್ದು, ಹುಲಿಗೆ ಆಮಿಷವೊಡ್ಡಲು ಮೇಕೆಯೊಂದಿಗೆ ಪಂಜರವನ್ನೂ ಇರಿಸಿದ್ದೇವೆ ಎಂದು ಹುಣಸೂರು ವಲಯದ ವಲಯ ಅರಣ್ಯಾಧಿಕಾರಿ ರತನ್ ತಿಳಿಸಿದ್ದಾರೆ.
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…