ಜಿಲ್ಲೆಗಳು

ವೀರನಹೊಸಳ್ಳಿಯಲ್ಲಿ ಆಪರೇಷನ್ ಟೈಗರ್

ಮೈಸೂರು:  ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಸುತ್ತಮುತ್ತ 10ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಗುರುವಾರ ಕಾರ್ಯಾಚರಣೆ ಆರಂಭಿಸಿದೆ.

ಗ್ರಾಮಸ್ಥರು ನೀಡಿದ ದೂರುಗಳ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗುರುವಾರ ಮುಂಜಾನೆ ಐದು ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದೆ. ಮತ್ತಿಗೋಡು ಆನೆ ಶಿಬಿರದ ಭೀಮ ಆನೆ ಸಹಾಯದಿಂದ ಬಿಆರ್ ಕಾವಲು, ಶೆಟ್ಟಿಹಳ್ಳಿ ಅರಣ್ಯ ಮತ್ತು ತೋಟಗಳ ಸುತ್ತಮುತ್ತ ಶೋಧ ಕಾರ್ಯಾಚರಣೆ ಪ್ರಾರಂಭವಾಗಿದೆ.

ಕಾರ್ಯಾಚರಣೆಯ ನಡುವೆಯೇ ಹುಲಿಯು ಹೆಮ್ಮಿಗೆ ಹಾಡಿಯ ತಾಯಮ್ಮ ಅವರಿಗೆ ಸೇರಿದ ಹಸುವನ್ನು ಎಳೆದುಕೊಂಡು ಹೋಗಿ ತಿಂದಿರುವ ಘಟನೆಯೂ ನಡೆದಿದೆ. ಈ ಭಾಗದಲ್ಲಿ ಬೆಳಗ್ಗೆ 10 ಗಂಟೆವರೆಗೂ ಹುಲಿಗಾಗಿ ಹುಡುಕಾಟ ನಡೆಸಿದರೂ ಹುಲಿ ಪತ್ತೆಯಾಗಿಲ್ಲ.

ಕೆಲ ದಿನಗಳ ಹಿಂದೆ ಹನಗೋಡು, ಅಬ್ಬೂರು, ಸಿಂಡೆನಹಳ್ಳಿ, ಹೆಮ್ಮಿಗೆ ಗ್ರಾಮಗಳಲ್ಲಿ ಈ ಹುಲಿ ಹತ್ತಕ್ಕೂ ಹೆಚ್ಚು ಹಸುಗಳನ್ನು ಕೊಂದು ಹಾಕಿದೆ. ಹುಲಿಯನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಈ ಸ್ಥಳದಲ್ಲಿ ಬೋನು ಇಟ್ಟಿದ್ದರೂ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಗ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಹುಲಿ ಕಾಣಿಸಿಕೊಂಡಿರುವ ವಿವಿಧೆಡೆ ಅತ್ಯಾಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, 11 ಮಂದಿ ಅರಣ್ಯ ಸಿಬ್ಬಂದಿ ಮರದ ತುದಿಯಿಂದ ಹುಲಿಯ ಚಲನವಲನದ ಮೇಲೆ ನಿಗಾ ಇಡಲು ಆರಂಭಿಸಿದ್ದಾರೆ.

ವಿಶೇಷ ಕಾರ್ಯಪಡೆಯ ನಾಲ್ಕು ಆನೆಗಳನ್ನೂ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದೆ. ಆನೆ ಕಾರ್ಯಪಡೆಯ ಎಂಟು ಮಂದಿ ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಹುಲಿ ಸೆರೆ ಕಾರ್ಯಾಚರಣೆಗೆ ಸಹಕರಿಸುತ್ತಿದ್ದಾರೆ. ಡಿಸಿಎಫ್ ಡಾ.ಹರ್ಷವರ್ದನ್ ಮಾರ್ಗದರ್ಶನದಲ್ಲಿ ಎಸಿಎಫ್ ಧನಂಜಯ್, ಆರ್ ಎಫ್ ಒ ರತನ್ ಹಾಗೂ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಡಿಸಿಎಫ್ ಡಾ ಹರ್ಷವರ್ಧನ್ ಮಾತನಾಡಿ ಹುಲಿಯಿಂದ ಜಾನುವಾರುಗಳನ್ನು ಕಳೆದುಕೊಂಡವರಿಗೆ ಹೆಚ್ಚಿನ ಪರಿಹಾರ ನೀಡಲು ಉನ್ನತ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ” ಈ ಪ್ರದೇಶದದಲ್ಲಿ ಹುಲಿ ಓಡಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು, ಪಗ್ ಗುರುತುಗಳೂ ಪತ್ತೆಯಾಗಿವೆ. ಅಕ್ಕಪಕ್ಕದ ಎಸ್ಟೇಟ್‌ ಗಳಲ್ಲಿ ಕ್ಯಾಮೆರಾ ಅಳವಡಿಸಿದ್ದು, ಹುಲಿಗೆ ಆಮಿಷವೊಡ್ಡಲು ಮೇಕೆಯೊಂದಿಗೆ ಪಂಜರವನ್ನೂ ಇರಿಸಿದ್ದೇವೆ ಎಂದು ಹುಣಸೂರು ವಲಯದ ವಲಯ ಅರಣ್ಯಾಧಿಕಾರಿ ರತನ್ ತಿಳಿಸಿದ್ದಾರೆ.

andolana

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

13 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

14 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

14 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

14 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

15 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

18 hours ago