ಜಿಲ್ಲೆಗಳು

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ವಿರೋಧ

ನ.2ರಿಂದ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಮೈಸೂರು: ಉದ್ಯೋಗ ಸೃಷ್ಟಿ ನೆಪದಲ್ಲಿ ರಾಜ್ಯದ ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ ಅನ್ನು ಖಾಸಗಿ ಕಂಪೆನಿಗಳಿಗೆ ನೀಡಲು ನಡೆಸುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ವಿರೋಧಿಸಿ ನ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸವಾವೇಶ ಆಯೋಜಿಸಲಾಗಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕದ ಸಂಯೋಜಕ ಬಡಗಲಪುರ ನಾಗೇಂದ್ರ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆyuತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ರಾಜ್ಯಕ್ಕೆ ಹೊಸತಲ್ಲ. ಈ ಹಿಂದೆಯೂ ಇಂತಹ ಸಮಾವೇಶ ನಡೆದಿದೆ. ಸಾಮಾನ್ಯವಾಗಿ ಚುನಾವಣೆಗಳು ಸಮೀಪಿಸುತ್ತಿರುವ ಸಮಯದಲ್ಲಿ ಇಂತಹ ಸಮಾವೇಶ ಸಂಘಟಿಸಿ, ಇಷ್ಟು ಲಕ್ಷ ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುತ್ತಿದೆ. ಇದರ ಫಲವಾಗಿ ಇಷ್ಟು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಇದರಿಂದ ನಮ್ಮ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಸಿಗುತ್ತದೆ ಎಂದು ಅಬ್ಬರದ ಪ್ರಚಾರ ಮಾಡಲಾಗುತ್ತದೆ. ಆ ಮೂಲಕ ಈ ರೀತಿ ಭ್ರಮೆ ಸೃಷ್ಟಿಸಲಾಗುತ್ತದೆ ಎಂದು ಆರೋಪಿಸಿದರು.

ವಾಸ್ತವದಲ್ಲಿ ಇಂತಹ ಹೂಡಿಕೆದಾರರ ಸಮಾವೇಶಗಳಿಂದ ರಾಜ್ಯದ ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಅನುಕೂಲವಾಗುವ ಬದಲು ಕಾರ್ಪೊರೇಟ್ ಕಂಪೆನಿಗಳು, ಏಜೆಂಟರಿಗೆ ಲಾಭವಾಗುತ್ತದೆ. ಅಲ್ಲದೆ, ಒಂದು ಕಡೆ ರೈತರು ತಮ್ಮ ಭೂಮಿ ಕಳೆದುಕೊಳ್ಳುತ್ತಾರೆ. ಕಾರ್ಮಿಕರ ಶೋಷಣೆ ಇನ್ನಷ್ಟು ಹೆಚ್ಚುತ್ತದೆ. ಹೀಗಾಗಿ ಇಂತಹ ಹೂಡಿಕೆದಾರರ ಸಮಾವೇಶ ಅಗತ್ಯವಿಲ್ಲ. ಬಲವಂತವಾಗಿ ಭೂಮಿ ಕಸಿದುಕೊಳ್ಳಬಾರದು, ರೈತರು, ದಲಿತರ ಸ್ವಾಧೀನದಲ್ಲಿರುವ ಕೃಷಿ ಭೂಮಿ ಸಕ್ರಮಗೊಳಿಸಬೇಕು, ಅತಿವೃಷ್ಟಿಯಿಂದ ನಷ್ಟಕ್ಕೆ ಗುರಿಯದವರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು, ವಿದ್ಯುತ್ ಕ್ಷೇತ್ರದ ಖಾಸಗೀಕರಣ ನಿಲ್ಲಬೇಕು ಎಂದು ಒತ್ತಾಯಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನಾ ಸವಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolana

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

9 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

10 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

10 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

10 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

11 hours ago