ಮೈಸೂರು: ಜಂಬೂಸವಾರಿ ಮುಗಿದರೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಎಲ್ಲಿ ನೋಡಿದರೂ ಜನಜಂಗುಳಿ ಕಾಣಿಸುತ್ತಿತ್ತು. ದಸರೆಯ ಮಾರನೇ ದಿನವಾದ ಗುರುವಾರ ಅರಮನೆಗೆ ಭೇಟಿ ನೀಡುವ ಜನರ ಸಂಖ್ಯೆ ಹೆಚ್ಚಾಗಿತ್ತು.
ಮೃಗಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಟಿಕೆಟ್ ಕೌಂಟರ್ ಬಳಿ ನೂಕುನುಗ್ಗಲು ಉಂಟಾಗಿತ್ತು. ಚಾಮುಂಡಿ ಬೆಟ್ಟ ಪ್ರವಾಸಿಗರಿಂದ ತುಂಬಿತ್ತು. ಸಾಲು ಸಾಲು ವಾಹನಗಳಿಂದ ಬೆಟ್ಟದ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಪರದಾಡುವಂತಾಯಿತು. ಸಂಚಾರ ನಿರ್ವಹಣೆಗೆ ಪೊಲೀಸರು ಹರಸಾಹಸಪಟ್ಟರು.
ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ಜಗನ್ಮೋಹನ ಅರಮನೆ ವೀಕ್ಷಿಸಿದ ಜನರು ದಸರಾ ವಸ್ತು ಪ್ರದರ್ಶನಕ್ಕೆ ಲಗ್ಗೆ ಇಟ್ಟಿದ್ದರು. ಸಂಜೆ ಐದು ಗಂಟೆಯ ನಂತರ ವಸ್ತುಪ್ರದರ್ಶನ ಆವರಣ ಜನರಿಂದ ತುಂಬಿ ತುಳುಕುತಿತ್ತು. ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿದ ಜನರು ರಾತ್ರಿ ಕೆಆರ್‌ಎಸ್‌ಗೆ ಭೇಟಿ ನೀಡಿ ಚಿಮ್ಮುವ ಕಾರಂಜಿ ನೋಡಿದರು.
ಟ್ರಾಫಿಕ್ ಜಾಮ್
ಅರಮನೆ ಸುತ್ತಮುತ್ತಲ ಮಾರ್ಗದಲ್ಲಿ ನೂರಾರು ವಾಹನಗಳು ಓಡಾಡುತ್ತಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿ ಸಾರ್ವಜನಿಕರು ಪರದಾಡುವಂತಾಯಿತು. ಕೆ.ಆರ್.ವೃತ್ತ, ಹಾರ್ಡಿಂಜ್ ವೃತ್ತ, ವಸ್ತು ಪ್ರದರ್ಶನದ ಬಳಿ ಸಾಲು ಸಾಲು ವಾಹನಗಳು ಬರುತ್ತಿದ್ದರಿಂದ ಜಾಮ್ ಆಗುತ್ತಿತ್ತು. ನಿನ್ನೆ ಪೂರ್ತಿ ಕೆಲಸ ಮಾಡಿ ದಣಿದಿದ್ದ ಸಂಚಾರಿ ಪೊಲೀಸರು ಕರ್ತವ್ಯಕ್ಕೆ ನಿೋಂಜನೆಗೊಂಡಿದ್ದರೂ ನಿರ್ವಹಣೆ ಬಗ್ಗೆ ಗಮನಹರಿಸದ ಕಾರಣ ಕೆಲವು ಕಡೆ ಬಹು ಹೊತ್ತಿನ ತನಕ ಕಾದು ಮುಂದೆ ಸಾಗಬೇಕಾಯಿತು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…