ಜಿಲ್ಲೆಗಳು

ಪಾಲಿಬೆಟ್ಟ ಮೀನು ವ್ಯಾಪಾರಿಯ ಹತ್ಯೆ ಪ್ರಕರಣ : ಆರೋಪಿ ನೌಷದ್ ಬಂಧನ

ಸಿದ್ದಾಪುರ  : ಪಾಲಿಬೆಟ್ಟದ ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ ಆರೋಪದಲ್ಲಿ ಆರೋಪಿ ನೌಶಾದ್ ಎಂಬತನನ್ನು ಸಿದ್ದಾಪುರ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ಡಿಸೆಂಬರ್ 10 ರಂದು ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಗಂಭೀರ ಗಾಯಗೊಳಿಸಿದ್ದ ನಂತರ ಆರೋಪಿ ಕಾರಿನೊಂದಿಗೆ ಮೂರ್ನಾಡು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಪರಾರಿಯಾಗಿದ್ದನು. ಸಿದ್ದಾಪುರದಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯ ಪತ್ತೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಅಯ್ಯಪ್ಪ ಪೊಲೀಸ್ ತಂಡವನ್ನು ನಿಯೋಜಿಸಲಾಗಿತ್ತು. ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶಿವಶಂಕರ್ ನೇತೃತ್ವದೊಂದಿಗೆ ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿಗಳು ತಲೆಮರಸಿಕೊಂಡಿದ್ದ ಆರೋಪಿಯನ್ನ ಮೈಸೂರಿನಲ್ಲಿ ಪತ್ತೆ ಹಚ್ಚಿ ಬಂದಿಸಿ ನ್ಯಾಯಕ್ಕೆ ಹಾಜರುಪಡಿಸಿದ್ದಾರೆ.

ಘಟನೆಯ ವಿವರ
ಪಾಲಿಟ್ಟದಲ್ಲಿ ಮೀನು ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ಚರ್ದು ಎಂಬವರ ಮಗ ಮಹಮ್ಮದ್ ತಾಸಿರ್ ವ್ಯಾಪಾರ ಮುಗಿಸಿಕೊಂಡು ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಆಲ್ಟೊ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಏಕಾಏಕಿ ಡಿಕ್ಕಿ ಪಡಿಸಿದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿ ಚಿಂತಾ ಜನಕ ಸ್ಥಿತಿಯಲ್ಲಿದ್ದ ತಾಹಿರ್ ನ್ನ ಪಾಲಿಬೆಟ್ಟ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ತಾಸಿರ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಡಿಕ್ಕಿ ಪಡಿಸಿದ ಕಾರು ಸಮೇತ ವ್ಯಕ್ತಿ ಪರಾರಿಯಾಗಿರುವ ಬಗ್ಗೆ ಸಿದ್ದಾಪುರ ಠಾಣೆಗೆ ದೂರು ನೀಡಿದ್ದರು.

ಹಳೆ ವೈಷಮ್ಯ ಘಟನೆಗೆ ಕಾರಣ.
ಮೀನು ವ್ಯಾಪಾರಿ ತಾಹಿರ್ ಹಾಗೂ ಪಾಲಿಬೆಟ್ಟದ ನೌಶಾದ್ ನಡುವೆ ಹಳೇ ವೈಷಮ್ಮ ಇರುವ ಹಿನ್ನೆಲೆಯಲ್ಲಿ ಕಾರು ಚಲಾಯಿಸಿಕೊಂಡು ಬಂದು ವ್ಯಕ್ತಿ ತಾಹಿರ್ ಎಂಬವರ ಮೇಲೆ ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಸಿದ್ದಾಪುರ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ ಸಂದರ್ಭ ಮೂರ್ನಾಡು ಬಳಿ ಕಾರು ಪತ್ತೆಯಾಗಿತ್ತು. ಕಾರನ್ನ ವಶಪಡಿಸಿಕೊಂಡು ತನಿಖೆ ಮುಂದುವರಿಸಿದ ಪೋಲಿಸರ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ .
ಚಿತ್ರ ಎಂ ಡಿ ಕೆ 16ಎಸ್ ಡಿ ಆರ್ 4 ಮೀನು ವ್ಯಾಪಾರಿ ಹತ್ಯೆ ಪ್ರಕರಣದ ಆರೋಪಿ ನೌಶಾದ್ ಬಂದಿಸಿದ ಪೋಲಿಸರು

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

8 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

8 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

9 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

9 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago