ಗೋಣಿಕೊಪ್ಪ: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಭೇರು ಪೈಂಟ್ಸ್ ಅಂಗಡಿಯಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟ ಸಂಭವಿಸಿದೆ.
ಇಡೀ ಕಟ್ಟಡ ಸಂಪೂರ್ಣವಾಗಿ ಬೆಂಕಿಯಿಂದ ಆವರಿಸಿಕೊಂಡು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಯಾಗಿತ್ತು. ನಂತರ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಯಿತಾದರೂ ಬೆಂಕಿಯ ತೀವ್ರತೆಗೆ ಎರಡೂ ನೀರಿನ ಟ್ಯಾಂಕರ್ ಖಾಲಿಯಾಗಿ ಅಗ್ನಿ ಶಾಮಕ ದಳಕ್ಕೆ ನೀರು ತುಂಬಿಸಲೂ ವ್ಯವಸ್ಥೆಯೂ ಇಲ್ಲದೆ, ಗ್ರಾಮ ಪಂಚಾಯಿತಿಯ ಟ್ಯಾಂಕರ್‌ನಿಂದ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಯಿತು. ಈ ಘಟನೆಯಲ್ಲಿ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸೇರಿದಂತೆ ಎಲ್ಲರೂ ಸೇರಿ ಹರಸಾಹಸ ಪಟ್ಟು ಕೊನೆಗೂ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅಗ್ನಿ ಆಕಸ್ಮಿಕಕ್ಕೆ ಕಾರಣ ಏನೆಂದು ತಿಳಿಯಲು ತನಿಖೆ ನಡೆಯುತ್ತಿದೆ.
ನವದೆಹಲಿ: ಕರ್ನಾಟಕ ರಾಜ್ಯದ ಹೈಕೋರ್ಟ್‌ನಲ್ಲಿ 158 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಯ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಈ…
ನವದೆಹಲಿ: ಮೈಸೂರಿನ ಹಳೆ ಕೆಸರೆ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕಗಳು ಅವೈಜ್ಞಾನಿಕವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು…
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ.…
ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರದಂದು ಹಲವು ಕಡೆ ವರ್ಷದ ಮೊದಲ ಮಳೆಯಾಗಿದ್ದು, ಆ ಮಳೆ ಬಾಳೆಗೆ ಸಂಕಷ್ಟ ತಂದಿದೆ. ಜಿಲ್ಲೆಯಲ್ಲಿ ನಿನ್ನೆ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗುಡಿಗೆರೆ ಬಳಿಯ ಮಳವಳ್ಳಿ-ಮದ್ದೂರು ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಆಟೋ ಸಂಪೂರ್ಣ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಕೆ ಮಾಡಿದ್ದು, ಕಾಂಗ್ರೆಸ್ ಪಕ್ಷದ ಶಾಸಕರಿಗೆ ಡಿನ್ನರ್ ಪಾರ್ಟಿ…