ಹನೂರು: ಕಳೆದ 3 ವರ್ಷದ ಅವಧಿಯಲ್ಲಿ ಹನೂರು ಪಟ್ಟಣ ಪಂಚಾಯಿತಿಗೆ ಎಸ್‍ಎಫ್‍ಸಿ ಹಾಗೂ ಇನ್ನಿತರೆ ಯೋಜನೆಯಡಿ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎನ್.ನಾಗರಾಜು ಉತ್ತರಿಸಿದ್ದಾರೆ.
ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರು ಕೇಳಿದ ಪ್ರಶ್ನೆಗೆ ಪೌರಾಡಳಿತ ಉತ್ತರ ನೀಡಿದ್ದು, ಈಗಾಗಲೇ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ 5 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. 14 ಮತ್ತು 15ನೇ ಹಣಕಾಸು ಆಯೋಗದ ಅನುದಾನದಲ್ಲಿ 2.07 ಕೋಟಿ ರೂ ಅನುದಾನ ನೀಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 3.42 ಕೋಟಿ ರೂ ಅನುದಾನ ಬಿಡುಗಡೆಗೊಂಡಿದೆ. ಕಳೆದ 3 ವರ್ಷದ ಅವಧಿಯಲ್ಲಿ ಎಸ್‍ಎಫ್‍ಸಿ ಮುಕ್ತ ನಿಧಿ ಹಾಗೂ ಕುಡಿಯುವ ನೀರಿನ ಅನುದಾನದಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೆಲವು ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ನಗರೋತ್ಥಾನ 3ನೇ ಹಂತದ ಯಜನೆಯಡಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಅಲ್ಲದೇ 1.37 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ತ್ಯಾಜ್ಯವನ್ನು ಸಂಗ್ರಹಿಸಲು, ಸಾಗಾಣೆ ಮಾಡಲು ಅಗತ್ಯವಿರುವ ಆಟೋ ಟಿಪ್ಪರ್‍ಗಳು, ಟಾಟಾ ಹಿಟಾಚಿ ಹಾಗೂ ಟ್ರ್ಯಾಕ್ಟರ್ ಟೈಲರ್‍ಗಳನ್ನು ಖರೀದಿಸಲಾಗಿದೆ ಎಂದು ಉತ್ತರಿಸಿದ್ದಾರೆ.
ಮಳೆ ಹಾನಿ ಪರಿಹಾರ ಸಂಬಂಧ ಶಾಸಕ ಆರ್.ನರೇಂದ್ರ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಆರ್.ಅಶೋಕ್ ಉತ್ತರಿಸಿದ್ದು, ಚಾ.ನಗರ ಜಿಲ್ಲೆಯಲ್ಲಿ ಮಳೆಗೆ ಪರಿಹಾರವನ್ನು ಬಿಡುಗಡೆ ಮಾಡಲಾಗಿರುತತದೆ. ಜಿಲ್ಲಾಧಿಕಾರಿ ಅವರ ಪ್ರಕೃತಿ ವಿಕೋಪದಡಿ ಖಾತೆಯಲ್ಲಿ 23,74,24,510 ರೂ ಅನುದಾನ ಲಭ್ಯವಿದ್ದು, ಚಾಮರಾಜನಗರ ತಾಲೂಕಿಗೆ 2 ಕೋಟಿ ರೂ, ಕೊಳ್ಳೇಗಾಲಕ್ಕೆ 50 ಲಕ್ಷ ರೂ, ಗುಂಡ್ಲುಪೇಟೆ ತಾಲೂಕಿಗೆ 80 ಲಕ್ಷ ರೂ, ಹನೂರಿಗೆ 50 ಲಕ್ಷ ರೂ ಹಾಗೂ ಯಳಂದೂರು ತಾಲೂಕಿಗೆ 2.5 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಉತ್ತರ ನೀಡಿದ್ದಾರೆ
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…