ಜಿಲ್ಲೆಗಳು

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ಸೂಕ್ತ ಕ್ರಮ : ಸಚಿವ MTB ನಾಗರಾಜ್

ಹನೂರು: ಕಳೆದ 3 ವರ್ಷದ ಅವಧಿಯಲ್ಲಿ ಹನೂರು ಪಟ್ಟಣ ಪಂಚಾಯಿತಿಗೆ ಎಸ್‍ಎಫ್‍ಸಿ ಹಾಗೂ ಇನ್ನಿತರೆ ಯೋಜನೆಯಡಿ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎನ್.ನಾಗರಾಜು ಉತ್ತರಿಸಿದ್ದಾರೆ.

ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರು ಕೇಳಿದ ಪ್ರಶ್ನೆಗೆ ಪೌರಾಡಳಿತ ಉತ್ತರ ನೀಡಿದ್ದು, ಈಗಾಗಲೇ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ 5 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. 14 ಮತ್ತು 15ನೇ ಹಣಕಾಸು ಆಯೋಗದ ಅನುದಾನದಲ್ಲಿ 2.07 ಕೋಟಿ ರೂ ಅನುದಾನ ನೀಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 3.42 ಕೋಟಿ ರೂ ಅನುದಾನ ಬಿಡುಗಡೆಗೊಂಡಿದೆ. ಕಳೆದ 3 ವರ್ಷದ ಅವಧಿಯಲ್ಲಿ ಎಸ್‍ಎಫ್‍ಸಿ ಮುಕ್ತ ನಿಧಿ ಹಾಗೂ ಕುಡಿಯುವ ನೀರಿನ ಅನುದಾನದಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೆಲವು ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ನಗರೋತ್ಥಾನ 3ನೇ ಹಂತದ ಯಜನೆಯಡಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಅಲ್ಲದೇ 1.37 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ತ್ಯಾಜ್ಯವನ್ನು ಸಂಗ್ರಹಿಸಲು, ಸಾಗಾಣೆ ಮಾಡಲು ಅಗತ್ಯವಿರುವ ಆಟೋ ಟಿಪ್ಪರ್‍ಗಳು, ಟಾಟಾ ಹಿಟಾಚಿ ಹಾಗೂ ಟ್ರ್ಯಾಕ್ಟರ್ ಟೈಲರ್‍ಗಳನ್ನು ಖರೀದಿಸಲಾಗಿದೆ ಎಂದು ಉತ್ತರಿಸಿದ್ದಾರೆ.

ಮಳೆ ಹಾನಿ ಪರಿಹಾರ ಸಂಬಂಧ ಶಾಸಕ ಆರ್.ನರೇಂದ್ರ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಆರ್.ಅಶೋಕ್ ಉತ್ತರಿಸಿದ್ದು, ಚಾ.ನಗರ ಜಿಲ್ಲೆಯಲ್ಲಿ ಮಳೆಗೆ ಪರಿಹಾರವನ್ನು ಬಿಡುಗಡೆ ಮಾಡಲಾಗಿರುತತದೆ. ಜಿಲ್ಲಾಧಿಕಾರಿ ಅವರ ಪ್ರಕೃತಿ ವಿಕೋಪದಡಿ ಖಾತೆಯಲ್ಲಿ 23,74,24,510 ರೂ ಅನುದಾನ ಲಭ್ಯವಿದ್ದು, ಚಾಮರಾಜನಗರ ತಾಲೂಕಿಗೆ 2 ಕೋಟಿ ರೂ, ಕೊಳ್ಳೇಗಾಲಕ್ಕೆ 50 ಲಕ್ಷ ರೂ, ಗುಂಡ್ಲುಪೇಟೆ ತಾಲೂಕಿಗೆ 80 ಲಕ್ಷ ರೂ, ಹನೂರಿಗೆ 50 ಲಕ್ಷ ರೂ ಹಾಗೂ ಯಳಂದೂರು ತಾಲೂಕಿಗೆ 2.5 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಉತ್ತರ ನೀಡಿದ್ದಾರೆ

andolanait

Recent Posts

ಮಂಡ್ಯ | ಕೆರೆಯಲ್ಲಿ ಬಾಲಕನ ಶವ ಪತ್ತೆ ; ಕೊಲೆ ಶಂಕೆ

ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…

8 hours ago

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

13 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

14 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

15 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

17 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

22 hours ago