ಪಾಂಡವಪುರದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ
ಪಾಂಡವಪುರ: ತಾಲ್ಲೂಕಿನ ಜಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಕ್ಕಳೊಂದಿಗೆ ಕಬಡ್ಡಿ ಆಡುವ ಮೂಲಕ ಚಾಲನೆ ನೀಡಿದರು.
ವಯಸ್ಸಿನ ಹಂಗು ತೊರೆದು ಕಬಡ್ಡಿ ಅಂಕಣಕ್ಕೆ ಇಳಿದ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಕ್ಕಳೊಂದಿಗೆ ಕಬಡ್ಡಿ ಆಟವಾಡುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಗಳು ಗ್ರಾಮೀಣ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮನುಷ್ಯರು ಆರೋಗ್ಯವಂತರಾಗಿರುತ್ತಿದ್ದರು. ಏಕೆಂದರೆ ಕೃಷಿ ಮಾಡುತ್ತಿದ್ದರು. ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶದ ಜನರೆ ಹಲವು ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಬೇಸರಿಸಿದರು.
ಈ ವೇಳೆ ತಾಪಂ ಇಒ ಲೋಕೇಶ್ ಮೂರ್ತಿ, ಸಹಾಯಕ ನಿರ್ದೇಶಕ ಸುರೇಂದ್ರ, ಗ್ರಾಪಂ ಅಧ್ಯಕ್ಷರಾದ ನಿಂಗಮ್ಮ, ಉಪಾಧ್ಯಕ್ಷ ಕೆಂಪೇಗೌಡ, ಮಾಜಿ ಉಪಾಧ್ಯಕ್ಷ ಲೋಕೇಶ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಅಶ್ವಥ್‌ಕುಮಾರ್ ಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬೆಟ್ಟಸ್ವಾಮಿಗೌಡ, ವಿಎಸ್‌ಎಸ್‌ಎನ್‌ಬಿ ಅಧ್ಯಕ್ಷ ಜೆ.ಶಿವಶಂಕರ್, ಬಿಜೆಪಿ ಮುಖಂಡ ಎಸ್.ಎನ್.ಟಿ. ಸೋಮಶೇಖರ್, ಪುರುಷೋತ್ತಮ್, ನಾಗಣ್ಣ, ಗ್ರಾಪಂ ಸದಸ್ಯರಾದ ದಿವಾಕರ, ದಾಸೇಗೌಡ, ಶ್ವೇತಾ ದೇವರಾಜು, ಶಂಕರ್, ಪ್ರಭಾವತಿ, ಸತೀಶ್, ಸವಿತಾ, ಸ್ವಾಮಿಗೌಡ, ಗೀತಾ, ಶ್ರೀದೇವಿ, ಚನ್ನಗಿರಿ, ನಾಗರತ್ನ, ಸೌಮ್ಯ, ಎಸ್.ಡಿ.ನಾಗರತ್ನ, ಕೆ.ಶಂಕರ್, ಮಹೇಶ್, ಪಿಡಿಓ ಸುರೇಶ್, ಕಾರ್ಯದರ್ಶಿ ರಕ್ಷಿತ್ ಹಾಜರಿದ್ದರು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…