ಜಿಲ್ಲೆಗಳು

ವಯಸ್ಸಿನ ಹಂಗು ತೊರೆದು ಕಬಡ್ಡಿ ಅಂಕಣಕ್ಕೆ ಇಳಿದ ಶಾಸಕ ಸಿ.ಎಸ್.ಪುಟ್ಟರಾಜು

ಪಾಂಡವಪುರದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಪಾಂಡವಪುರ: ತಾಲ್ಲೂಕಿನ ಜಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಕ್ಕಳೊಂದಿಗೆ ಕಬಡ್ಡಿ ಆಡುವ ಮೂಲಕ ಚಾಲನೆ ನೀಡಿದರು.

ವಯಸ್ಸಿನ ಹಂಗು ತೊರೆದು ಕಬಡ್ಡಿ ಅಂಕಣಕ್ಕೆ ಇಳಿದ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಕ್ಕಳೊಂದಿಗೆ ಕಬಡ್ಡಿ ಆಟವಾಡುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಗಳು ಗ್ರಾಮೀಣ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮನುಷ್ಯರು ಆರೋಗ್ಯವಂತರಾಗಿರುತ್ತಿದ್ದರು. ಏಕೆಂದರೆ ಕೃಷಿ ಮಾಡುತ್ತಿದ್ದರು. ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶದ ಜನರೆ ಹಲವು ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಬೇಸರಿಸಿದರು.

ಈ ವೇಳೆ ತಾಪಂ ಇಒ ಲೋಕೇಶ್ ಮೂರ್ತಿ, ಸಹಾಯಕ ನಿರ್ದೇಶಕ ಸುರೇಂದ್ರ, ಗ್ರಾಪಂ ಅಧ್ಯಕ್ಷರಾದ ನಿಂಗಮ್ಮ, ಉಪಾಧ್ಯಕ್ಷ ಕೆಂಪೇಗೌಡ, ಮಾಜಿ ಉಪಾಧ್ಯಕ್ಷ ಲೋಕೇಶ್, ಪಿಎಲ್‌ಡಿ ಬ್ಯಾಂಕ್  ಮಾಜಿ ಅಧ್ಯಕ್ಷ ಅಶ್ವಥ್‌ಕುಮಾರ್ ಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬೆಟ್ಟಸ್ವಾಮಿಗೌಡ, ವಿಎಸ್‌ಎಸ್‌ಎನ್‌ಬಿ ಅಧ್ಯಕ್ಷ ಜೆ.ಶಿವಶಂಕರ್, ಬಿಜೆಪಿ ಮುಖಂಡ ಎಸ್.ಎನ್.ಟಿ. ಸೋಮಶೇಖರ್, ಪುರುಷೋತ್ತಮ್, ನಾಗಣ್ಣ, ಗ್ರಾಪಂ ಸದಸ್ಯರಾದ ದಿವಾಕರ, ದಾಸೇಗೌಡ, ಶ್ವೇತಾ ದೇವರಾಜು, ಶಂಕರ್, ಪ್ರಭಾವತಿ, ಸತೀಶ್, ಸವಿತಾ, ಸ್ವಾಮಿಗೌಡ, ಗೀತಾ, ಶ್ರೀದೇವಿ, ಚನ್ನಗಿರಿ, ನಾಗರತ್ನ, ಸೌಮ್ಯ, ಎಸ್.ಡಿ.ನಾಗರತ್ನ, ಕೆ.ಶಂಕರ್, ಮಹೇಶ್, ಪಿಡಿಓ ಸುರೇಶ್, ಕಾರ್ಯದರ್ಶಿ ರಕ್ಷಿತ್ ಹಾಜರಿದ್ದರು.

andolanait

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

26 mins ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

34 mins ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

38 mins ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

40 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

51 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

1 hour ago