ಹಿಂಬದಿ ಸವಾರನ ಸ್ಥಿತಿ ಗಂಭೀರ * ಜಕ್ಕನಹಳ್ಳಿ ವೃತ್ತದಲ್ಲಿ ಭೀಕರ ಅಪಘಾತ
ಪಾಂಡವಪುರ: ಮೈಸೂರಿನಿಂದ ತಿಪಟೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ತಾಲ್ಲೂಕಿನ ಜಕ್ಕನಹಳ್ಳಿ ವೃತ್ತದಲ್ಲಿ ಸಂಭವಿಸಿದೆ.
ತಾಲ್ಲೂಕಿನ ಕದಲಗೆರೆ ಗ್ರಾಮದ ಕೆ.ಜೆ.ಭರತ್(೨೬) ಮೃತ ಯುವಕ, ಅದೇ ಗ್ರಾಮದ ನಾಗೇಶ್ ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೈಸೂರು ಕಡೆಯಿಂದ ತಿಪಟೂರು ಕಡೆಗೆ ವೇಗವಾಗಿ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿಗೆ ಕದಲಗೆರೆ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಬಸಕ್ಕೆ ಬೈಕ್ ಸವಾರ ಭರತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕನಿಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.
ಜಕ್ಕನಹಳ್ಳಿ ವೃತ್ತದ ಬಳಿ ಪದೇಪದೇ ಅಪಘಾತಗಳು ಸಂಭವಿಸುತ್ತಿದ್ದು, ಸರ್ಕಲ್‌ನಲ್ಲಿ ಅಪಘಾತವನ್ನು ತಡೆಗಟ್ಟಲು ಅಗತ್ಯ ಕ್ರಮ ಜರುಗಿಸಬೇಕು. ಇದೀಗ ಮೈಸೂರು-ಬೀದರ್ ಮುಖ್ಯರಸ್ತೆ ಅಭಿವೃದ್ಧಿಗೊಂಡಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್‌ಗಳು ಸೇರಿದಂತೆ ವಾಹನಗಳು ವೇಗವಾಗಿ ಸಂಚರಿಸುತ್ತವೆ. ಇದರಿಂದಾಗಿ ಜಕ್ಕನಹಳ್ಳಿ ಸರ್ಕಲ್‌ನಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿ, ಸಾವು ನೋವುಗಳು ಸಂಭವಿಸುತ್ತಿವೆ. ಹಾಗಾಗಿ ವೃತ್ತದಲ್ಲಿ ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ರಸ್ತೆಯಲ್ಲಿ ಹಂಪ್ಸ್ಸ್ಗಳನ್ನು ಹಾಕಬೇಕೆಂದು ಒತ್ತಾಯಿಸಿ ಸ್ಥಳೀಯರು, ಸಂಬoಧಿಕರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಅಧಿಕಾರಿಗಳು ಆಗಮಿಸಬೇಕೆಂದು ಒತ್ತಾಯಿಸಿದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪಾಂಡವಪುರ ಸಿಪಿಐ ಲವಕುಮಾರ್ ಅವರು, ಪ್ರತಿಭಟನಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ಮೃತದೇಹವನ್ನು ಗ್ರಾಮಕ್ಕೆ ತೆಗೆದುಕೊಂಡು ಹೋದರು. ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…