Mysore
27
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಪಾಂಡವಪುರ : ಮೃತ ಸ್ವಾಮಿಗೌಡರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

ಮಂಡ್ಯ : ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ನವರ ಹುಟ್ಟು ಹಬ್ಬದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ವಾಪಸಾಗುವ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತರಾದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳೆಕುಪ್ಪೆ ಗ್ರಾಮದ  ನಿವಾಸಿ ಸ್ವಾಮಿಗೌಡ ಅವರ ನಿವಾಸಕ್ಕೆ  ಇಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಹರಿಹರ ಬೈಪಾಸ್‌ ಬಳಿ ನಡೆದ ಅಪಘಾತದಲ್ಲಿ ವೃದ್ಧ ಸ್ವಾಮಿಗೌಡ ನಿಧನರಾಗಿದ್ದು ಇವರು ಆ.3ರಂದು ಕಾರ್ಯಕ್ರಮವನ್ನು ಮುಗಿಸಿ ಪಾಂಡವಪುರಕ್ಕೆ ವಾಪಸ್‌ ಬರುವ ವೇಳೆ ತಪ್ಪಿಸಿಕೊಂಡು ಹೆದ್ದಾರಿಯ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪಿದ್ದಾರೆ. ಈ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಹಿಟ್‌ ಅಂಡ್‌ ರನ್‌ ಪ್ರಕರಣ ದಾಖಲಾಗಿತ್ತು. ಸ್ವಾಮಿಗೌಡ ಅವರು ನಾಪತ್ತೆಯಾಗಿರುವ ಸಂಬಂಧ ಇವರ ಕುಟುಂಬಸ್ಥರು ಶ್ರೀರಂಗಪಟ್ಟಣ ದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಹರಿಹರ ಪೊಲೀಸ್‌ ಠಾಣೆಗೆ ಈ ಸಂಬಂಧವಾಗಿ ಸ್ವಾಮಿಗೌಡ ಅವರ ಭಾವಚಿತ್ರವನ್ನು ಕಳುಹಿಲಾಗಿತ್ತು. ಗುರುತಿಸಿದ ನಂತರ ಪ್ರಕರಣ  ತಡವಾಗಿ ಬೆಳಕಿಗೆ ಬಂದು  ಮರಣೋತ್ತರ ಪರೀಕ್ಷೆಯನ್ನು ನಡೆಸಿ ಸ್ವಾಮಿಗೌಡ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!