ಮಂಡ್ಯ : ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ನವರ ಹುಟ್ಟು ಹಬ್ಬದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ವಾಪಸಾಗುವ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತರಾದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳೆಕುಪ್ಪೆ ಗ್ರಾಮದ ನಿವಾಸಿ ಸ್ವಾಮಿಗೌಡ ಅವರ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಹರಿಹರ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ವೃದ್ಧ ಸ್ವಾಮಿಗೌಡ ನಿಧನರಾಗಿದ್ದು ಇವರು ಆ.3ರಂದು ಕಾರ್ಯಕ್ರಮವನ್ನು ಮುಗಿಸಿ ಪಾಂಡವಪುರಕ್ಕೆ ವಾಪಸ್ ಬರುವ ವೇಳೆ ತಪ್ಪಿಸಿಕೊಂಡು ಹೆದ್ದಾರಿಯ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪಿದ್ದಾರೆ. ಈ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿತ್ತು. ಸ್ವಾಮಿಗೌಡ ಅವರು ನಾಪತ್ತೆಯಾಗಿರುವ ಸಂಬಂಧ ಇವರ ಕುಟುಂಬಸ್ಥರು ಶ್ರೀರಂಗಪಟ್ಟಣ ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಹರಿಹರ ಪೊಲೀಸ್ ಠಾಣೆಗೆ ಈ ಸಂಬಂಧವಾಗಿ ಸ್ವಾಮಿಗೌಡ ಅವರ ಭಾವಚಿತ್ರವನ್ನು ಕಳುಹಿಲಾಗಿತ್ತು. ಗುರುತಿಸಿದ ನಂತರ ಪ್ರಕರಣ ತಡವಾಗಿ ಬೆಳಕಿಗೆ ಬಂದು ಮರಣೋತ್ತರ ಪರೀಕ್ಷೆಯನ್ನು ನಡೆಸಿ ಸ್ವಾಮಿಗೌಡ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು.
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…