Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಶವಸಂಸ್ಕಾರ ವೇಳೆ ಹೆಜ್ಜೇನು ದಾಳಿ : 40ಕ್ಕೂ ಹೆಚ್ಚು ಮಂದಿ ಗಾಯ

ಪಾಂಡವಪುರ: ಶವಸಂಸ್ಕಾರ ಮಾಡುವ ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ೪೦ಕ್ಕೂ ಅಧಿಕ ಮಂದಿಯ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಪಟ್ಟಣದ ಹಾರೋಹಳ್ಳಿ ಗ್ರಾಮದ ಹೊರವಲಯದಲ್ಲಿ ಮಧ್ಯಾಹ್ನ ೨.೩೦ರ ಸುಮಾರಿಗೆ ನಡೆದಿದೆ.
ಹೆಜ್ಜೇನು ದಾಳಿಗೆ ಒಳಗಾದಂತಹ ಮಹಿಳೆಯರು, ಮಕ್ಕಳು ಮತ್ತು ಸಾರ್ವಜನಿಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಟ್ಟಣದ ಹಾರೋಹಳ್ಳಿ ಗ್ರಾಮದಲ್ಲಿ ಧರ್ಮರಾಜು ಎಂಬುವರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರ ಮಾಡಲು ಗ್ರಾಮದ ಹೊರವಲಯದ ರುದ್ರಭೂಮಿಗೆ ತೆಗೆದುಕೊಂಡು ಹೋಗಿ ಅಂತ್ಯಸAಸ್ಕಾರ ಮಾಡುವ ಸಂದರ್ಭದಲ್ಲಿ ಧೂಪ, ಗಂಧದ ಕಡ್ಡಿ ಹೊಗೆಗೆ ಮರದಲ್ಲಿ ಕಟ್ಟಿದ್ದ ಹೆಜ್ಜೇನು ಎದ್ದು ಅಂತ್ಯಸAಸ್ಕಾರದಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರ ಮೇಲೆ ದಾಳಿ ನಡೆಸಿವೆ.
ಹೆಜ್ಜೇನು ದಾಳಿ ಮಾಡುತ್ತಿದ್ದಂತೆಯೇ ಸಾರ್ವಜನಿಕರು ಶವವನ್ನು ಬಿಟ್ಟು ಓಡಿಹೋಗಿದ್ದಾರೆ. ಹೆಜ್ಜೇನು ದಾಳಿಯಿಂದ ಮಹಿಳೆಯರು, ಮಕ್ಕಳು ಸೇರಿದಂತೆ ೪೦ಕ್ಕೂ ಅಧಿಕ ಮಂದಿಗೆ ಗಾಯಕ್ಕೆ ಒಳಗಾಗಿದ್ದಾರೆ. ಹೆಜ್ಜೇನು ದಾಳಿಯಿಂದ ಗಾಯಗೊಂಡ ಸಾರ್ವಜನಿಕರು ತಕ್ಷಣವೇ ಸ್ಥಳೀಯರು ಪಾಂಡವಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ದಾಳಿಗೆ ಒಳಗಾದ ಎಲ್ಲ ಸಾರ್ವಜನಿಕರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಸಾರ್ವಜನಿಕರಿಗೆ ಸಣ್ಣಪಟ್ಟ ಗಾಯಗಳಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲರಿಗೂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ.
ಹೆಜ್ಜೇನು ದಾಳಿಯಲ್ಲಿ ಹಾರೋಹಳ್ಳಿ ಗ್ರಾಮದ ರಮೇಶ್, ಸತ್ಯನಾರಾಯಣ್, ವೀಣಾ, ವರುಣ್, ಆನಂದ್, ಪ್ರಜ್ವಲ್, ನೂತನ್ ಸೇರಿದಂತೆ ಹಲವು ಮಂದಿ ಗಾಯಗೊಂಡು ಚಿಕಿತ್ಸೆ ಪಡೆದು ವಾಪಸ್ಸಾಗಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ