ಹನೂರು: ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನದ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ವಿಷಪೂರಿತ ಹಾವೊಂದು ಕಚ್ಚಿ ಬಾಲಕಿ ಮೃತಪಟ್ಟಿರುವ ಘಟನೆ ಕೋಣನಕೆರೆ ಗ್ರಾಮದಲ್ಲಿ ಜರುಗಿದೆ.
ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಾದಯ್ಯ ರವರ ಪುತ್ರಿ ಶ್ರೇಯಾ(16) ಮೃತಪಟ್ಟ ದುರ್ದೈವಿ.
ಘಟನೆಯ ವಿವರ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನ ಹನ್ನೆರಡು ಗಂಟೆ ವೇಳೆ ಊಟ ತೆಗೆದುಕೊಂಡು ಹೋಗುವ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ ಬಾಲಕಿ ಕಿರುಚಿಕೊಂಡಿದ್ದಾಳೆ ತಕ್ಷಣ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ಯಲು 108 ಆಂಬುಲೆನ್ಸ್ ಕರೆ ಮಾಡಿದ್ದಾರೆ ಆದರೆ ಸಕಾಲಕ್ಕೆ ಆಂಬ್ಯುಲೆನ್ಸ್ ದೊರಕದ ಪರಿಣಾಮ ಖಾಸಗಿ ವಾಹನದಲ್ಲಿ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ ಆದರೂ ಸಹ ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಮೃತಪಟ್ಟಿದ್ದಾಳೆ. ಮೃತ ಬಾಲಕಿಯು ಎಂಟನೇ ತರಗತಿ ಓದುತ್ತಿದ್ದು ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಮನೆಯಲ್ಲಿದ್ದಳು ಎಂಬುದಾಗಿ ತಿಳಿದುಬಂದಿದೆ.
ಈ ಸಂಬಂಧ ರಾಮಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ರಾಮಾಪುರ ಪೋಲಿಸರು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ಬಾಲಕಿಯ ಶವವನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…