ಜಿಲ್ಲೆಗಳು

ಪಾರ್ವತಾಂಬ ಜಾತ್ರೆಯಲ್ಲಿ ಜಾನುವಾರುಗಳಿಗೆ ನಿಷೇಧ

ಗುಂಡ್ಲುಪೇಟೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಸಿಲ್ದಾರ್ ಮಾಹಿತಿ

ಗುಂಡ್ಲುಪೇಟೆ : ನ.೧೪ ಮತ್ತು ೧೫ರಂದು ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಶ್ರೀ ಪಾರ್ವತಾಂಬ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪಟ್ಟಣದ ತಾಲ್ಲೂಕು ತಹಸಿಲ್ದಾರ್ ಕೊಠಡಿಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಸಿ.ಜಿ ರವಿಶಂಕರ್‌ರವರ ನೇತೃತ್ವದಲ್ಲಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ತಹಸಿಲ್ದಾರ್ ರವಿಶಂಕರ್, ಈ ಬಾರಿ ನಡೆಯಲಿರುವ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಜಾನುವಾರುಗಳಿಗೆ ಮತ್ತು ಎತ್ತಿನ ಗಾಡಿಗಳಿಗೆ ನಿಷೇಧ ಹೇರಲಾಗಿದೆ. ರಾಜ್ಯ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಹರಡುವಿಕೆ ಇರುವ ಕಾರಣ ಜಾನುವಾರುಗಳಿಗೆ ನಿಷೇಧ ಹೇರಲಾಗಿದೆ. ಆರೋಗ್ಯಕರ ಜಾನುವಾರುಗಳು ಜಾತ್ರೆಯ ಸಂದರ್ಭದಲ್ಲಿ ಒಂದೇ ಸ್ಥಳದಲ್ಲಿ ಒಟ್ಟುಗೂಡಿದ ಸಂದರ್ಭದಲ್ಲಿ ರೋಗ ಇಲ್ಲದ ಜಾನುವಾರುಗಳಿಗೂ ರೋಗ ಹರಡುವಿಕೆ ಸಾಧ್ಯತೆ ಹೆಚ್ಚಾಗಿ ಇರುವುದರಿಂದ ಜಾನುವಾರುಗಳಿಗೆ ಜಾತ್ರೆ ಸಂದರ್ಭದಲ್ಲಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ರಥೋತ್ಸವ ಇರುವ ಹಿನ್ನೆಲೆಯಲ್ಲಿ ತೇರನ್ನು ಎಳೆಯುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೇರಿನ ಚಕ್ರವನ್ನು ಹಾಗೂ ತೇರನ್ನು ಪರೀಕ್ಷಿಸಿ ಜಾತ್ರಾ ಮಹೋತ್ಸವವನ್ನು ನಡೆಸಬೇಕೆಂದು ಸಂಬಂಧಿಸಿದವರಿಗೆ ಸೂಚನೆ ನೀಡಿದರು.

ಕೆಎಸ್‌ಆರ್‌ಟಿಸಿ ಗುಂಡ್ಲುಪೇಟೆ ಘಟಕದ ವತಿಯಿಂದ ಜಾತ್ರಾ ಸಂದರ್ಭದಲ್ಲಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿದ ಅವರು, ಸ್ಥಳದಲ್ಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಮೊಕ್ಕಾಂ ಹೂಡಿ ಜಾತ್ರಾ ಸಂದರ್ಭದಲ್ಲಿ ಕೆಲಸ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಪೂರ್ವಭಾವಿ ಸಭೆಯಲ್ಲಿ ಪಾರ್ವತಮ್ಮ ಜಾತ್ರಾ ಸಮಿತಿಯ ಅಧ್ಯಕ್ಷರಾದ ಶಿವಕುಮಾರ, ಖಜಾಂಚಿ ಮಹೇಶ್, ಕಾರ್ಯದರ್ಶಿ ಅಶೋಕ್, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಸಮಿತಿಯ ಸದಸ್ಯರು ಹಾಜರಿದ್ದರು.

andolanait

Recent Posts

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

38 mins ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

42 mins ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

46 mins ago

ನಾ.ದಿವಾಕರ ಅವರ ವಾರದ ಅಂಕಣ: ಎಳೆ ಪ್ರತಿಭೆಗೆ ಸಾಕ್ಷಿಯಾದ ರಂಗ ಪ್ರಯೋಗ

ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ.  ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…

51 mins ago

ಶಂಕರಾಚಾರ್ಯರ ಬಂಧನಕ್ಕೆ ವೇದಿಕೆ ಸಿದ್ಧ!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…

56 mins ago

ಮೊಬೈಲ್ ಮಿತ ಬಳಕೆ; ವಿದ್ಯಾರ್ಥಿಗಳ ಬಯಕೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…

1 hour ago