ಮೈಸೂರು : ರಾಜ್ಯದಾದ್ಯಂತ ಸಾಕಷ್ಟು ಚರ್ಚೆಯಾಗುತ್ತಿರುವ ಪೇಸಿಎಂ ಅಭಿಯಾನಕ್ಕೆ ನಗರದಲ್ಲಿಂದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಅವರು ಪೋಸ್ಟರ್ ಅಂಟಿಸುವ ಮೂಲಕ ಚಾಲನೆ ನೀಡಿದರು.
ನಗರದ ಜೆ.ಕೆ.ಮೈದಾನದ ಕಾಂಪೌಂಡ್‌ಗೆ ಪೇಸಿಎಂ ಪೋಸ್ಟರ್ ಅಂಟಿಸುವ ಮೂಲಕ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಈ ಸಂಸರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಕೆಪಿಸಿಸಿ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ,
ಮುಖಂಡರಾದ ಶಫಿ, ಗಿರೀಶ್, ಮಹೇಶ್ ಮತ್ತಿತರ ಮುಖಂಡರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಪೇ ಸಿಎಂ ಅಭಿಯಾನವನ್ನು ನೆನ್ನೆಯಿಂದ ಜಿಲ್ಲಾ ಮಟ್ಟದಲ್ಲೂ ನಡೆಸಲು ನಿರ್ಧರಿಸಿರುವ ಕಾಂಗ್ರೆಸ್ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ 10 ಸಾವಿರ ಪೋಸ್ಟರ್ ಗಳನ್ನು ಪೂರೈಸುತ್ತಿದೆ. ಬಿಜೆಪಿಯೊಂದಿಗೆ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಮುಂದಿನ ವಿಧಾನಸಭೆ ಚುನಾವಣೆವರೆಗೂ ಇದೇ ರೀತಿಯ ಆಕ್ರಮಣಕಾರಿಯ ಪ್ರಚಾರ ತಂತ್ರಗಳನ್ನು ರೂಪಿಸಲು ಯೋಜಿಸಿದೆ.
ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಆಪರೇಷನ್ ಕಮಲಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಗೋಡೆಗಳ ಮೇಲೆ ಇದೇ ರೀತಿಯ ಕೆಲವು ಪೋಸ್ಟರ್ ಗಳು
ಕಂಡುಬಂದಿದ್ದವು. ಆಗ ಯಡಿಯೂರಪ್ಪ ಹೆಚ್ಚು ತಲೆ ಕೆಡಿಸಿಕೊಳ್ಳದೆ ನಿರ್ಲಕ್ಷಿಸಿದ್ದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…
ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಬಳಿ ನಡೆದಿದೆ. ರಶ್ಮಿ…
ರಾಮನಗರ: ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ…
ಇಸ್ರೇಲ್: ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ…