ಮಂಡ್ಯ : ರಾಷ್ಟ್ರೀಯ ತನಿಖೆ ಸಂಸ್ಥೆ ದೇಶಾದ್ಯಂತ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ ಬಳಿಕ ಮಂಡ್ಯದಲ್ಲೂ ಪೊಲೀಸರು ಪಿಎಫ್ ಐ ಸಂಘಟನೆ ಜಿಲ್ಲಾಧ್ಯಕ್ಷನ ಮನೆ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.
ನಗರದ ಗುತ್ತಲು ಬಡಾವಣೆಯ ಸಪ್ದರಿಯಾ ನಗರದಲ್ಲಿ ವಾಸವಾಗಿರುವ ಇರ್ಫಾನ್ 34 ಎಂಬಾತ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ಆತನನ್ನು ವಶಕ್ಕೆ ಪಡೆದರು.
ಬಳಿಕ ಆರೋಪಿಯನ್ನು ತಹಸೀಲ್ದಾರ್ ಮನೆಗೆ ಹಾಜರುಪಡಿಸಿದ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಎನ್ಐಎ ದೇಶಾದ್ಯಂತ ದಾಳಿ ನಡೆಸಿದ ಕಾರಣ ಅದನ್ನು ವಿರೋಧಿಸಿ ಇರ್ಫಾನ್ ಪಿ ಎಫ್ ಐ ಕಾರ್ಯಕರ್ತರು ಮತ್ತು ಇತರರನ್ನು ಬಳಸಿಕೊಂಡು ಮಂಡ್ಯ ಮತ್ತು ಇತರೆ ಕಡೆಗಳಲ್ಲಿ ಗೊಂದಲ ಸೃಷ್ಟಿ ಮಾಡಲು ಮುನ್ನಾರ ನಡೆಸಿದ ಎನ್ನಲಾಗಿದೆ. ಈ ಬಗ್ಗೆ ಎಚ್ಚೆತ್ತ ಪೊಲೀಸರು ಆತನನ್ನ ಕರೆದು ತಿಳಿ ಹೇಳಿದ್ದರು. ಆದರೂ ಸಹ ನಗರದ ವಿವಿಧಡೆ ಸಭೆಗಳನ್ನು ನಡೆಸಿ ಗೊಂದಲ ಸೃಷ್ಟಿಸುವ ಹುನ್ನಾರ ಮಾಡಿದ್ದ.
ಇದರಿಂದ ಎಚ್ಚತ್ತ ಪೊಲೀಸರು ಇಂದು ಬೆಳಗ್ಗೆ 4 ಗಂಟೆ ವೇಳೆಗೆ ಆತನ ಮೇಲೆ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದರು. ಬಳಿಕ ತಹಸೀಲ್ದಾರ್ ಮಹಮದ್ ಕುಂಞ ಅಹಮದ್ ಅವರ ನಿವಾಸಕ್ಕೆ ಹಾಜರುಪಡಿಸಿ ನಂತರ ಅವರ ಆದೇಶದ ಮೇರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಆರೋಪಿ ಇರ್ಫಾನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಗುತ್ತಲು ಬಡಾವಣೆಯ ಪಿಎಫ್ಐ ಕಾರ್ಯಕರ್ತರು ನಗರದ ವಿನೋಬ ರಸ್ತೆ ಬಳಿ ಇರುವ ತಹಸೀಲ್ದಾರ್ ನಿವಾಸದ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಮನವೊಲಿಸುವ ಯತ್ನ ನಡೆಸಿದರಾದರು ಪೊಲೀಸರ ವಿರುದ್ಧವೇ ಘೋಷಣೆ ಕೂಗಿದ ಕಾರಣ ಪ್ರತಿಭಟನಾಕಾರರ ಪೈಕಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ಅವರ ಸೂಚನೆ ಮೇರೆಗೆ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಪಿಎಸ್ಐ ರಮೇಶ್ ಅವರುಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.
ಈ ಸಂಬಂಧ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…