ಮೈಸೂರು: ಗುಪ್ತಚರ ವರದಿ ಹಿನ್ನೆಲೆಯಲ್ಲಿ ಮೈಸೂರಿನ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.
ಕಳೆದ ವಾರ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮೇಲೆ ಹಾಗೂ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿ ಪಿಎಫ್ಐ ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಆ ವಿಚಾರಣೆ ಸಂದರ್ಭದಲ್ಲಿ ಕೆಲವು ಮಾಹಿತಿಗಳು ಹೊರಬಿದ್ದಿವೆ. ಎನ್ಐಎ ಅಧಿಕಾರಿಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಮಾಹಿತಿ ನೀಡಿದ್ದು, ಆ ಮಾಹಿತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಪಿಎಫ್ಐ ಜಿಲ್ಲಾಧ್ಯಕ್ಷ ಬಿಲಾಲ್ ಷರೀಫ್ ಅವರನ್ನು ಕಲ್ಯಾಣಗಿರಿ ನಿವಾಸದಲ್ಲಿ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.
ಮತ್ತೊಬ್ಬ ಮೈಸೂರು ಜಿಲ್ಲಾ ಪಿಎಫ್ಐ ಮಾಜಿ ಕಾರ್ಯದರ್ಶಿ ಜಾಫರ್ ಷರೀಫ್ ಹಾಗೂ ಪಿಎಫ್ಐ ಸಕ್ರಿಯ ಕಾರ್ಯಕರ್ತ ಫೈರೋಜುಲ್ಲಾ ಷರೀಫ್ ಅವರನ್ನು ಮನೆಗಳಲ್ಲಿ ಬೆಳ್ಳಂಬೆಳಗ್ಗೆ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…