ಮೈಸೂರು: ನಗರದ ವಿಜಯನಗರದಲ್ಲಿ ಪಿಜಿ ನಡೆಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.
ಜಯಶ್ರೀ ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್‌ನೋಟ್ ಬರೆದಿಟ್ಟು ತನ್ನ ಸಾವಿಗೆ ಸಾಲದ ಬಾಧೆಯೇ ಕಾರಣ ಎಂಬುದನ್ನು ತಿಳಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಿಜಿ ಗಂಗಾಧರೇಶ್ವರ ಎಂಬ ಪಿಜಿ ನಡೆಸುತ್ತಿದ್ದ ಜಯಶ್ರೀ ಅವರು ಪಿಜಿ ಸಲುವಾಗಿ ಸಾಲ ಮಾಡಿದ್ದರು.
ಇನ್ನು ಹೆಚ್ಚಿನ ಆದಾಯ ಬಾರದ ಕಾರಣ ಮತ್ತಷ್ಟು ಸಾಲ ಮಾಡಿದ್ದರು ಎನ್ನಲಾಗಿದೆ. ಸಮಯಕ್ಕೆ ಸರಿಯಾಗಿ ಸಾಲ ಹಿಂದಿರುಗಿಸಲು ಜಯಶ್ರೀ ವಿಫಲವಾಗಿದ್ದು, ಸಾಲ ನೀಡಿದವರು ಪಿಜಿ ಬಳಿ ಬಂದು ಗಲಾಟೆ ಮಾಡಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜಯಶ್ರೀ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೇ ಡೆತ್‌ನೋಟ್‌ನಲ್ಲಿ ಮಕ್ಕಳಿಗೆ ಒಳ್ಳೆ ತಾಯಿ ಆಗಲಿಲ್ಲ, ಸಾಲದ ತಾಯಿ ಆದೆ ಎಂದು ಜಯಶ್ರೀ ಬರೆದುಕೊಂಡಿದ್ದು, ಸಾವಿತ್ರಿ, ಸುಕನ್ಯ, ಪ್ರೇಮಾ, ದೇವಮ್ಮ, ಸಾಕಮ್ಮ, ಪುಷ್ಪಲತಾ, ಪುಷ್ಪ, ಸುಮ, ಶೋಭಾ, ವಿಜಯ, ಫೈನಾನ್ಸ್ ಮಾಲೀಕ ಪ್ರದೀಪ್ ಹಾಗೂ ಕುಮಾರ್ ಎಂಬುವವರು ಕಿರುಕುಳ ನೀಡುತ್ತಿದ್ದರು ಎಂದು ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…