ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಈ ವಿಚಾರವಾಗಿ ದೀಪಿಕಾ ಕುಟುಂಬಸ್ಥರು ದೀಪಿಕಾ ಸಾಯುವ ಮುನ್ನೆ ಕೊನೆಯದಾಗಿ ಕರೆ ಮಾಡಿರುವ ಅದೇ ಗ್ರಾಮದ ನಿತೀಶ್ ಎಂಬುವವನ ವಿರುದ್ಧ ಕೊಲೆ ಮಾಡಿರುವ ಆರೋಪ ಮಾಡಿ ದೂರು ನೀಡಿದ್ದರು. ಅತ್ತ ನಿತೀಶ್ ದೀಪಿಕಾ ಶವ ಸಿಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ.
ಹೀಗೆ ಕಾಣೆಯಾದ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ತಲೆ ಮರೆಸಿಕೊಂಡಿದ್ದ ನಿತೀಶ್‌ನನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ನಿತೀಶ್ ಕೊಲೆ ಮಾಡಿರುವುದು ತಾನೇ ಎಂದು ತಿಳಿದುಬಂದಿದೆ.
ದೀಪಿಕಾಳನ್ನು ಕೊಲೆ ಮಾಡಲು ಮೊದಲೇ ಯೋಜನೆ ನಡೆದಿತ್ತು. ಕೊಲೆ ಮಾಡುವ ಮುನ್ನ ನಿತೀಶ್ ಗುಂಡಿ ಸಿದ್ಧಪಡಿಸಿಕೊಂಡಿದ್ದ. ಬಳಿಕ ದೀಪಿಕಾಳನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿದ ಎಂಬ ಅಂಶ ವಿಚಾರಣೆ ವೇಳೆ ತಿಳಿದುಬಂದಿದೆ. ಕೊಲೆ ಮಾಡಿರುವುದು ತಾನೇ ಎಂದೂ ಸಹ ನಿತೀಶ್ ಒಪ್ಪಿಕೊಂಡಿದ್ದಾನೆ.
ಇನ್ನು ದೀಪಿಕಾ ಶವ ಪತ್ತೆಯಾಗುವುದಕ್ಕೂ ಮುನ್ನ ಕಾಣೆಯಾಗಿದ್ದಾಳೆ ಎಂದು ಕುಟುಂಬ ಹುಡುಕಾಟ ನಡೆಸುತ್ತಿದ್ದಾಗ ದೀಪಿಕಾ ತಂದೆಗೆ ಕರೆ ಮಾಡಿ ʼಅಕ್ಕ ಸಿಕ್ಕಿದ್ಳಾ ಅಪ್ಪಾಜಿʼ ಎಂದು ವಿಚಾರಿಸಿ ತನ್ನ ಮೇಲೆ ಅನುಮಾನ ಬಾರದ ಹಾಗೆ ನಟಿಸಿದ್ದ ಎಂಬ ವಿಷಯ ಸಹ ತಿಳಿದುಬಂದಿದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…
ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು…
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…
ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.…
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…