ಹನೂರು: ಪಟ್ಟಣದ ಸಾರ್ವಜನಿಕರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಪಥಸಂಚಲನ.
ಪಟ್ಟಣದ ವಿವೇಕನಂದಾ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 15 ದಿನಗಳಿಂದ ಆರ್ ಎಸ್ ಎಸ್ ವತಿಯಿಂದ ಪ್ರಾಥಮಿಕ ಶಿಕ್ಷಾವರ್ಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ಶುಕ್ರವಾರ ಬಿ.ಎಂ.ಜಿ ಪ್ರೌಢಶಾಲೆಯಲ್ಲಿ ಸಮಾರೋಪ ಸಮಾರಂಭ ಹಾಗೂ ಪಥಸಂಚಲನ ಕಾರ್ಯಕ್ರಮ ನಡೆಯಿತು.ಪರಿಶಿಷ್ಟ ಜಾತಿ ಸಮುದಾಯವದವರಿಂದ ಆಕ್ಷೇಪ: ಆರ್.ಎಸ್.ಎಸ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪಥಸಂಚಲನಕ್ಕೆ ಅವಕಾಶ ನೀಡದಂತೆ ಸಮುದಾಯದ ಮುಖಂಡರು ಇನ್ ಸ್ಪೆಕ್ಟರ್ ಸಂತೋಷ್ ಕಶ್ಯಪ್ ಅವರಿಗೆ ಮನವಿ ಮಾಡಿದರು.
ಧರ್ಮ ಮತ್ತು ಜಾತಿ ವಿಚಾರದಲ್ಲಿ ಸಾಮರಸ್ಯ ಕದಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಪಟ್ಟಣದ ಬಿಎಂಜಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಸಂಜೆ 5.30 ಕ್ಕೆ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿರುವುದು ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಬಡಾವಣೆ ಮುಖ್ಯರಸ್ತೆಯಲ್ಲಿ ಪಥಸಂಚಲನ ನಡೆಸುವುದಕ್ಕೆ ಅವಕಾಶ ನೀಡಬಾರದು. ಎಂದು ಸಮುದಾಯದ ಮುಖಂಡರುಗಳು, ಯುವಕರು ಆಗ್ರಹಿಸಿದರು.
ಶುಭಾ ಖಟಾವಕರ ಮ್ಹೆತ್ರಸ್ ಸಿಗರೇಟು ಮತ್ತು ಜೂಜಿನಷ್ಟೇ ಸಾಮಾಜಿಕ ಜಾಲತಾಣಗಳೂ ಅಪಾಯಕರವೆ? ಅವು ನಿಮ್ಮನ್ನು ಚಟದ ದಾಸರನ್ನಾಗಿಸಬಲ್ಲವೆ? ಇತ್ತೀಚೆಗೆ ಅಮೆರಿಕದ…
ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…