ಜಿಲ್ಲೆಗಳು

ಹನೂರು : ಪೊಲೀಸ್ ಭದ್ರತೆಯಲ್ಲಿ ಆರ್ ಎಸ್ ಎಸ್ ಪಥಸಂಚಲನ

ಹನೂರು: ಪಟ್ಟಣದ ಸಾರ್ವಜನಿಕರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಪಥಸಂಚಲನ.

ಪಟ್ಟಣದ ವಿವೇಕನಂದಾ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 15 ದಿನಗಳಿಂದ ಆರ್ ಎಸ್ ಎಸ್ ವತಿಯಿಂದ ಪ್ರಾಥಮಿಕ ಶಿಕ್ಷಾವರ್ಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ‌ ಅಂಗವಾಗಿ ಶುಕ್ರವಾರ ಬಿ.ಎಂ.ಜಿ ಪ್ರೌಢಶಾಲೆಯಲ್ಲಿ ಸಮಾರೋಪ ಸಮಾರಂಭ ಹಾಗೂ ಪಥಸಂಚಲನ ಕಾರ್ಯಕ್ರಮ‌ ನಡೆಯಿತು.ಪರಿಶಿಷ್ಟ ಜಾತಿ ಸಮುದಾಯವದವರಿಂದ ಆಕ್ಷೇಪ: ಆರ್.ಎಸ್.ಎಸ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪಥಸಂಚಲನಕ್ಕೆ ಅವಕಾಶ ನೀಡದಂತೆ ಸಮುದಾಯದ ಮುಖಂಡರು ಇನ್ ಸ್ಪೆಕ್ಟರ್ ಸಂತೋಷ್ ಕಶ್ಯಪ್ ಅವರಿಗೆ ಮನವಿ ಮಾಡಿದರು.

ಧರ್ಮ ಮತ್ತು ಜಾತಿ ವಿಚಾರದಲ್ಲಿ ಸಾಮರಸ್ಯ ಕದಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಪಟ್ಟಣದ ಬಿಎಂಜಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಸಂಜೆ 5.30 ಕ್ಕೆ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿರುವುದು ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಬಡಾವಣೆ ಮುಖ್ಯರಸ್ತೆಯಲ್ಲಿ ಪಥಸಂಚಲನ ನಡೆಸುವುದಕ್ಕೆ ಅವಕಾಶ ನೀಡಬಾರದು. ಎಂದು ಸಮುದಾಯದ ಮುಖಂಡರುಗಳು, ಯುವಕರು ಆಗ್ರಹಿಸಿದರು.
ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ಮಾತನಾಡಿ, ಯಾವುದೇ ಸಂಘಟನೆ ಸಾರ್ವಜನಿಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಕ್ಕೆ ತಡೆಯೊಡ್ಡುವುದು ಸರಿಯಲ್ಲ ಎಂದು ವಾದಿಸಿದರು. ಇದಕ್ಕೆ ಇನ್ಸ್ಪೆಕ್ಟರ್ ಹಾಗೂ ಮುಖಂಡರಗಳ ನಡುವೆ ಕೆಲವು ಗಂಟೆ ವಾಗ್ವಾದ ನಡೆಯಿತು.
ಪಥಸಂಚಲನಕ್ಕೆ ದಲಿತ ಸಂಘಟನೆಯಿಂದ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಪೊಲೀಸ್ ಇಲಾಖೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪಥಸಂಚಲನಕ್ಕೆ ಭದ್ರತೆ ನೀಡಲು ಮುಂದಾಯಿತು.
ಚಾಮರಾಜನಗರ,ಗುಂಡ್ಲುಪೇಟೆ ಸಂತೇಮರಳ್ಳಿ, ಕೊಳ್ಳೇಗಾಲ ರಾಮಾಪುರ ಠಾಣೆಗಳಿಂದ ಇನ್ ಸ್ಪೆಕ್ಟರ್, ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿಲಾಗಿತ್ತು. ಅಲ್ಲದೇ ಎರಡು ಜಿಲ್ಲಾ ಸಶಸ್ತ್ರ ಮಿಸಲು ಪಡೆ ಹಾಗೂ ಒಂದು ಕೆ.ಎಸ್ ಆರ್ ಪಿ ತುಕಡಿಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿತ್ತು.
ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದಿಂದ ಆರಂಭವಾದ ಪಥಸಂಚಲನ ಮುಖ್ಯ ರಸ್ತೆ ಹಾಗೂ ವಿವಿಧ ಬಡಾವಣೆಗಳಲ್ಲಿ ಸಾಗಿ ಬಿ.ಎಂ.ಜಿ ಶಾಲೆಯಲ್ಲಿ ಕೊನೆಗೊಂಡಿತು.

andolanait

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

4 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

4 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

4 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

4 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

4 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

4 hours ago