ಜಿಲ್ಲೆಗಳು

ಅಂಚೆ ಇಲಾಖೆ ಉಳಿವಿಗಾಗಿ ಹೋರಾಟ ಅಗತ್ಯ: ಕೆ.ಎನ್.ಉಮೇಶ್

ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್‌ನ ೧೨ನೇ ಫೆಡರಲ್ ಕೌನ್ಸಿಲ್ ಅಧಿವೇಶನ ಉದ್ಘಾಟನೆ

ಮೈಸೂರು: ಅಂಚೆ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರಗಳು ನಡೆಯುತ್ತಿದ್ದು, ಸಾರ್ವಜನಿಕರ ಸ್ವತ್ತಾದ ಅಂಚೆ ಇಲಾಖೆಯನ್ನು ಉಳಿಸಿಕೊಳ್ಳಬೇಕಾದದ್ದು ಪ್ರತಿಯೊಬ್ಬ ಅಂಚೆ ನೌಕರನ ಜವಾಬ್ದಾರಿಯಾಗಿರುವ ಕಾರಣ ಅಗತ್ಯ ಹೋರಾಟ ನಡೆಸಬೇಕು ಎಂದು ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್.ಉಮೇಶ್ ಸಲಹೆ ನೀಡಿದರು.
ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಗೋವಿಂದರಾವ್ ಮೆಮೋರಿಯಲ್ ಹಾಲ್‌ನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯೀಸ್‌ನ ೧೨ನೇ ಫೆಡರಲ್ ಕೌನ್ಸಿಲ್ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಚೆ ಇಲಾಖೆಯನ್ನು ಆರು ಘಟಕಗಳನ್ನಾಗಿ ವಿಭಜಿಸಲು ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಇದೊಂದು ಅವೈಜ್ಞಾನಿಕ ಕ್ರಮವಾಗಿದೆ. ಒಂದೆಡೆ ಲಾಭ ಮತ್ತೊಂದೆಡೆ ನಷ್ಟದಲ್ಲಿರುವ ಬೇರೆ ಬೇರೆ ಬ್ಯಾಂಕ್‌ಗಳನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿರುವ ಸರ್ಕಾರ ಅಂಚೆ ಇಲಾಖೆಯನ್ನು ಆರು ಘಟಕಗಳಾಗಿ ವಿಭಜಿಸಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯವಾಡಿದರು.
೧೯೯೧ರಲ್ಲಿ ಆರಂಭವಾದ ಉದಾರೀಕರಣದ ಫಲವಾಗಿ ದೇಶದಲ್ಲಿಂದು ಎಲ್ಲಾ ಸಾರ್ವಜನಿಕ ರಂಗದ ಉದ್ಯಮಗಳನ್ನು ಒಂದೊಂದಾಗಿ ಖಾಸಗೀಕರಣ ಮಾಡುವ ಪ್ರಕ್ರಿಯೆ ಶುರುವಾಗಿದೆ. ಇದಕ್ಕಾಗಿ ಒಂದು ಇಲಾಖೆಯನ್ನೇ ತೆರೆಯಲಾಗಿದೆ. ನವರತ್ನಗಳು ಎಂದು ಕರೆಯಲಾಗುವ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಅಥವಾ ಖಾಸಗೀಕರಣ ಮಾಡಲು ಹೊರಟಿರುವುದು ಸರ್ಕಾರದ ಆರ್ಥಿಕ ದಿವಾಳಿತನದ ಸಂಕೇತವಾಗಿದೆ ಎಂದು ವಿಷಾಧಿಸಿದರು.
ಕರ್ನಾಟಕ ವೃತ್ತದ ಚೀಫ್ ಪೋಸ್ಟ್ ವಾಸ್ಟರ್ ಜನರಲ್ ಎಸ್.ರಾಜೇಂದ್ರಕುವಾರ್ ಮಾತನಾಡಿ, ಬದಲಾಗುತ್ತಿರುವ ಗ್ರಾಹಕರ ಮನೋಭಾವಕ್ಕೆ ತಕ್ಕಂತೆ ಸೇವೆಗಳನ್ನು ಒದಗಿಸಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಅಂಚೆ ಇಲಾಖೆಯ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್‌ನ ವಿಶ್ರಾಂತ ಸೆಕ್ರೆಟರಿ ಜನರಲ್ ಆರ್.ಎನ್.ಪರಾಶರ್ ಹೊಸ ಪಿಂಚಣಿ ನೀತಿಯನ್ನು ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಕರ್ನಾಟಕ ವೃತ್ತದ ನ್ಯಾಷನಲ್ ಫೆಡರೇಷನ್ ಆಫ್ ಪೋಸ್ಟಲ್ ಎಂಪ್ಲಾಯಿಸ್‌ನ ಅಧ್ಯಕ್ಷ ಎ.ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

15 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

16 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

17 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

19 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

23 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

23 hours ago