ಮೈಸೂರು: ಅಂಚೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ.
ಹೌದು. 18 ರಿಂದ 25 ವರ್ಷದೊಳಗಿನವರು ವಾರ್ಷಿಕವಾಗಿ 399 ರೂಗಳನ್ನು ಪಾವತಿ ಮಾಡಿದರೆ, 10ಲಕ್ಷ ರೂಪಾಯಿಗಳ ಅಪಘಾತ ವಿಮೆ ಅನುಕೂಲವನ್ನುಪಡೆಯಬಹುದಾಗಿದೆ. ಈ ಮೂಲಕ ಅಂಚೆ ಇಲಾಖೆಯು ಆಕಸ್ಮಿಕ ಅವಘಡಗಳಿಗೆ ತುತ್ತಾಗುವ ಜನಸಾಮಾನ್ಯರಿಗೆ ನೆರವು ನೀಡಲು ಮುಂದಾಗಿದೆ.
ಈ ವಿಮೆಯು ಫಲಾನುಭವಿಗಳು ಆಕಸ್ಮಿಕವಾಗಿ ಅಪಘಾತಕ್ಕೆ ತುತ್ತಾದರೆ ಅಥವಾ ಅಂಚೆ ಇಲಾಖೆಯು ಸೂಚಿಸಿರುವ ಅವಘಡದ ಸನ್ನಿವೇಶಗಳಿಗೆ ಒಳಗಾದರೆ ಆರ್ಥಿಕ ನೆರವು ಸಿಗಲಿದೆ.
ಈ ವಿಮಾ ಯೋಜನೆಯು ಫಲಾನುಭವಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅವರ ಕುಟುಂಬಸ್ಥರಿಗೆ ವಿಮೆ ಮೊತ್ತ, ಶಾಶ್ವತ ಅಂಗವೈಕಲ್ಯವಾದರೆ ಆರ್ಥಿಕ ಸಹಾಯ, ಆಸ್ಪತ್ರೆ ಖರ್ಚು ವೆಚ್ಚ ಸಿಗಲಿದೆ. ಅಲ್ಲದೆ, ಮೃತರ ಮಕ್ಕಳ ಶಿಕ್ಷಣಕ್ಕಾಗಿ ನೆರವು ದೊರಕಲಿದೆ. ಈ ಸಂಬಂಧ ಸಮೀಪದ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಖಾತೆ ತೆರೆದು ಈ ವಿಮಾ ಯೋಜನೆ ಲಾಭ ಪಡೆದುಕೊಳ್ಳಬಹುದೆಂದು ತಿಳಿಸಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…