ಹನೂರು: ಕೊಳ್ಳೇಗಾಲ ಹನೂರು ಮುಖ್ಯರಸ್ತೆ ಅಗಲೀಕರಣ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಸದರಿ ಮುಖ್ಯರಸ್ತೆಯಲ್ಲಿ ಬರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಪ್ರಯುಕ್ತ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹನೂರು ಟೌನ್, ಚಿಂಚಳ್ಳಿ, ಲೊಕ್ಕನಹಳ್ಳಿ, ಬೆಳತೂರು ಫೀಡರ್ ಗಳ ವ್ಯಾಪ್ತಿಯಲ್ಲಿ ನವೆಂಬರ್ 10 ರಂದು ರಸ್ತೆ ಅಗಲೀಕರಣ ಮರ ತೆರವು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ದಿನಾಂಕದಂದು ಬೆಳಿಗ್ಗೆ 6 ರಿಂದ ಬೆಳಿಗ್ಗೆ 11 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಆಗುವುದು. ಇದಲ್ಲದೆ ನವೆಂಬರ್ 9 ರಿಂದ ನವೆಂಬರ್ 20 ರವರೆಗೆ ಕೆಶಿಪ್ ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಕಂಬಗಳನ್ನು ತೆರವು ಮಾಡಬೇಕಾಗಿರುವುದರಿಂದ ವಿದ್ಯುತ್ ಅಡಚಣೆಯಾಗಲಿದೆ . ಆದ್ದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…