ಜಿಲ್ಲೆಗಳು

ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ

ಹನೂರು: ತಾಲೂಕಿನ ಮಾಲಿಂಗನತ್ತ ಗ್ರಾಮಕ್ಕೆ ನಿರಂತರ ಜ್ಯೋತಿ ಯೋಜನೆಯಡಿ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಗ್ರಾಮಸ್ಥರು ಸೋಮವಾರ ಬೆಳಗ್ಗೆ ಪ್ರತಿಭಟನೆ ನಡೆಸಿರುವ ಘಟನೆ ಜರುಗಿದೆ.

ಹನೂರು ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮಾಲಿಂಗನತ್ತ ಗ್ರಾಮದಲ್ಲಿ ಸುಮಾರು 60 ಕುಟುಂಬಗಳಿದ್ದು 250 ಕ್ಕೂ ಹೆಚ್ಚು  ಜನಸಂಖ್ಯೆಯನ್ನು ಹೊಂದಿದೆ.

ಲೊಕ್ಕನಹಳ್ಳಿ ಹೋಬಳಿಯ ಎಲ್ಲಾ ಗ್ರಾಮಗಳಿಗೆ ನಿರಂತರ ಜ್ಯೋತಿ ಯೋಜನೆಯಡಿ  ನಿರಂತರ ವಿದ್ಯುತ್ ನೀಡಲು  ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ, ನಲ್ಲಿಮರದ ದೊಡ್ಡಿ, ಹಾವಿನ ಮೂಲೆ ಸೇರಿದಂತೆ ಮಾಲಿಂಗನತ್ತ ಗ್ರಾಮದ ನಿವಾಸಿಗಳು ನಿರಂತರ ವಿದ್ಯುತ್ ಯೋಜನೆಯಿಂದ ವಂಚಿತರಾಗಿದ್ದಾರೆ. ಈ ಗ್ರಾಮಗಳ ಮುಖಾಂತರವೇ ಇತರೆ ಗ್ರಾಮಗಳಿಗೆ ನಿರಂತರ ಯೋಜನೆ ಯಡಿ  ವಿದ್ಯುತ್ ಪೂರೈಕೆಯಾಗುತ್ತಿದೆ ಆದರೆ ಈ ಗ್ರಾಮಗಳಿಗೆ ಸಂಪರ್ಕ ನೀಡದೆ ಮುಂದಿನ ಗ್ರಾಮಗಳಿಗೆ ವಿದ್ಯುತ್ ನೀಡಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ .

ಗ್ರಾಮದ ನಿವಾಸಿ ಸೆಂದಿಲ್  ಕುಮಾರ್ ಮಾತನಾಡಿ ನಮ್ಮ ಗ್ರಾಮಕ್ಕೆ ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ಸಮರ್ಪಕವಾಗಿ ಪೂರೈಕೆ ಮಾಡದೇ ಇರುವುದರಿಂದ ವಿದ್ಯಾರ್ಥಿಗಳು ಸೇರಿದಂತೆ ಮಹಿಳೆಯರಿಗೆ ತುಂಬಾ ತೊಂದರೆಯಾಗಿದೆ. ದಿನದ 24 ಗಂಟೆಯಲ್ಲಿ ಕೇವಲ ಏಳು ಗಂಟೆ ಮಾತ್ರ ವಿದ್ಯುತ್ ಪೂರೈಕೆ ಮಾಡುತ್ತಿದ್ದಾರೆ. ಗಾಳಿ ಮಳೆ ಹಾಗೂ ಇನ್ನಿತರ ತುರ್ತು ಸಂದರ್ಭಗಳಲ್ಲಿ ವಿದ್ಯುತ್ ಪೂರೈಕೆ ಯಾಗದೆ ವಿದ್ಯಾರ್ಥಿಗಳ ಓದಿಗೆ ತೀವ್ರ ತೊಂದರೆ ಆಗಿದೆ. ಕೆಲವೊಮ್ಮೆ ಕುಡಿಯುವ ನೀರಿಗೂ ಅಹಂಕಾರ ಉಂಟಾಗಿದೆ ಸಂಬಂಧ ಪಟ್ಟ ಸೆಸ್ಕಾಂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ವಿದ್ಯಾರ್ಥಿ ಜಡೆ ಸ್ವಾಮಿ ಮಾತನಾಡಿ ಗ್ರಾಮದಲ್ಲಿ ವಿದ್ಯುತ್ ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲ ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ  ತೊಂದರೆ ಆಗಿದೆ ದಯವಿಟ್ಟು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಲೋಕನಹಳ್ಳಿ ಹೋಬಳಿಯ ಎಲ್ಲಾ ಗ್ರಾಮಗಳಿಗೆ ನಿರಂತರ ವಿದ್ಯುತ್ ಯೋಜನೆ ಯಡಿ ವಿದ್ಯುತ್ ಪೂರೈಸಲು ಡಿಪಿಆರ್ ಸಿದ್ದಪಡಿಸಿ ಅನುಮೋದನೆಗಾಗಿ ಕಳುಹಿಸಲಾಗಿದೆ. ಟೆಂಡರ್ ಮುಗಿದ ನಂತರ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಎಂದು ಸೆಸ್ಕಾಂ ಎಇಇ ಶಂಕರ್ ಆಂದೋಲನ ಟಿವಿಗೆ ಮಾಹಿತಿ ನೀಡಿದ್ದಾರೆ.

 

andolanait

Recent Posts

ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿ | ರಾಹುಲ್‌ ಗಾಂಧಿ ಹಾಗೂ ಅಶ್ವಿನ್‌ ವೈಷ್ಣವ್‌ ನಡುವೆ ಟ್ವಿಟ್‌ ವಾರ್…

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…

42 mins ago

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

60 mins ago

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…

2 hours ago

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

2 hours ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

3 hours ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

3 hours ago