ಚಾಮರಾಜನಗರ: ರಾಜ್ಯದ ಹಲವು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯುತ್ ಬಿಲ್ ಕಟ್ಟದ ಕಾರಣಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು ಈ ಸಂಬಂಧ ಇಂದು ಚಾಮರಾಜನಗರ ಎಐಡಿಎಸ್‌ಒ ಕಾರ್ಯಕರ್ತರುಗಳು ಪ್ರತಿಭಟನೆ ನಡೆಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ವಿದ್ಯುತ್ ಸ್ಥಗಿತಗೊಂಡಿರುವುದರಿಂದ ವಿದ್ಯಾಭ್ಯಾಸಕ್ಕೆ ತೊಡಕು ಉಂಟಾಗಿದೆ ಎಂದು ಪ್ರತಿಭಟನಾಕಾರರು ಜಿಲ್ಲಾಡಳಿತ ಭವನದ ಎದುರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವ ಮೂಲಕ ಸರ್ಕಾರ ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿ ಬಳಿಕ ಜಿಲ್ಲಾಧಿಕಾರಿ ಮೂಲಕ ತಾಂತ್ರಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಆಸಿಯಾ ಬೇಗಂ, ವಿದ್ಯಾರ್ಥಿಗಳಾದ ನಿಖಿತಾ, ಪ್ರಿಯಾಂಕಾ, ಭೂಮಿಕಾ, ಮುಬಾರಕ್, ಮನೋಜ್, ಸೃಷ್ಟಿ, ಸಂಜಯ್, ಉಲ್ಲಾಸ್, ಚಂದನ್, ಪವನ್, ಜಹೀರ್, ಅಂಶು, ಧನುಶ್ರೀ ಇನ್ನಿತರರು ಭಾಗವಹಿಸಿದ್ದರು.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…