ಜಿಲ್ಲೆಗಳು

ಮೋದಿ ಕರೆಯಂತೆ ದೇವಾಲಯ ಸ್ವಚ್ಛಗೊಳಿಸಿದ ಪ್ರತಾಪ್‌ ಸಿಂಹ

ಮೈಸೂರು: ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ಮೋದಿ ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ನಾಸಿಕ್‌ನ ಕಾಲಾರಾಮ್‌ ದೇವಾಲಯವನ್ನು ಸ್ವಚ್ಛಗೊಳಿಸುವ ಮೂಲಕ ʼಸ್ವಚ್ಛತಾ ಅಭಿಯಾನʼಕ್ಕೆ ಚಾಲನೆ ನೀಡಿದ್ದರು. ಬಳಿಕ ಮಾತನಾಡಿದ್ದ ಮೋದಿ ರಾಮಲಲ್ಲಾ ಪ್ರತಿಷ್ಠಾಪನೆ ನಡೆಯುವ ಮುನ್ನ ದೇಶಾದ್ಯಂತ ದೇವಸ್ಥಾನಗಳ ಸ್ವಚ್ಛತೆ ಮಾಡುವಂತೆ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದರು.

ಅದರಂತೆ ದೇಶದಾದ್ಯಂತ ವಿವಿಧೆಡೆ ಜನತೆ ದೇವಾಲಯಗಳನ್ನು ಸ್ವಚ್ಛಗೊಳಿಸುವ ಮೂಲಕ ಮೋದಿ ಕರೆಯನ್ನು ಪಾಲಿಸಿದರು. ಜನತೆ ಅಷ್ಟೇ ಅಲ್ಲದೇ ರಾಜಕಾರಣಿಗಳೂ ಸಹ ಈ ಕೆಲಸವನ್ನು ಮಾಡುತ್ತಿದ್ದು ಇದೀಗ ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್‌ ಸಿಂಹ ಸಹ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.

ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಾಪ್‌ ಸಿಂಹ ಆಲಯವನ್ನು ಸ್ವಚ್ಛಗೊಳಿಸಿದ್ದಾರೆ. ಈ ಕುರಿತ ಫೋಟೊಗಳನ್ನು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಪ್ರತಾಪ್‌ ಸಿಂಹ “ಜನವರಿ 22ರಂದು ಪ್ರಭು ಶ್ರೀರಾಮ ಬರುತ್ತಿದ್ದಾನೆ. ರಾಮನು ಬರುವ ಈ ಶುಭ ಸಂದರ್ಭದಲ್ಲಿ ನಮ್ಮ ಸುತ್ತಮುತ್ತಲಿನ ದೇವಾಲಯಗಳು ಹಾಗೂ ಅದರ ಪರಿಸರವನ್ನು ಸ್ವಚ್ಚಗೊಳಿಸೋಣ. ಶ್ರೀರಾಮನನ್ನು ಸ್ವಾಗತಿಸೋಣ” ಎಂದು ಬರೆದುಕೊಂಡಿದ್ದಾರೆ.

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

6 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

6 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

6 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

7 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

7 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

7 hours ago