ಜಿಲ್ಲೆಗಳು

ಸಂಸದ ಪ್ರತಾಪ್ ಸಿಂಹಗೆ ಬುದ್ಧಿ ಹೇಳಿ : ಸಿಎಂ ಗೆ ರಾಮ್‌ದಾಸ್‌ ದೂರು

ಬೆಂಗಳೂರು-ಒಂದು ಧರ್ಮದ ವಿರುದ್ಧ ಅನಗತ್ಯವಾಗಿ ಪ್ರಚೋದನೆ ನೀಡುತ್ತಿರುವುದು ಹಾಗೂ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕರೆದು ಬುದ್ದಿ ಹೇಳಬೇಕೆಂದು ಶಾಸಕ ರಾಮದಾಸ್ ಅವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ.
ಬುಧವಾರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್ .ಟಿ.
ನಗರದ ನಿವಾಸದಲ್ಲಿ
ಭೇಟಿ ಮಾಡಿದ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕರೂ ಆಗಿರುವ ರಾಮದಾಸ್, ಸಂಸದ ಪ್ರತಾಪ್ ಸಿಂಹ ಅವರಿಗೆ ಕಡಿವಾಣ ಹಾಕದಿದ್ದರೆ ಪಕ್ಷಕ್ಕೆ ಮಾರಕ ಆಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಗುಂಬಜ್ ಮಾದರಿಯ ಬಸ್ ನಿಲ್ದಾಣಗಳನ್ನು ತೆರವುಗೊಳಿಸದಿದ್ದರೆ ನಾನೇ ಒಡೆದು ಹಾಕುತ್ತೇನೆ ಎಂದು ಅವರು ಹೇಳಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಮೈಸೂರು ಮಹಾರಾಜರು ಕಟ್ಟಿಸಿದ ಅರಮನೆ ತುದಿಯಲ್ಲಿ ಗುಂಬಜ್ ಮಾದರಿಯಿದೆ ಸಾರ್ವಜನಿಕರು ಇದನ್ನು ಕೂಡ ತೆರವುಗೊಳಿಸುತ್ತೀರ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಕರೆದು ಬುದ್ದಿವಾದ ಹೇಳಬೇಕೆಂದು ಮನವಿ ಮಾಡಿದ್ದಾರೆ.
ಈ ಹಿಂದೆಯೂ ಅವರು ಸಾಕಷ್ಟು ವಿವಾದಗಳನ್ನು ಮಾಡಿದಾಗ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವಾಗಬಾರದೆದು ಮೌನಕ್ಕೆ ಶರಣಾಗಿದ್ದೆ. ಈಗ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಒಡೆದು ಹಾಕುತ್ತೇನೆ ಎಂದು ಹೇಳಿರುವುದು ಒಬ್ಬ ಜನಪ್ರತಿನಿಧಿಯಾಗಿ ಮಾಡುವ ಕೆಲಸ ಇದೇನಾ ಎಂದು ಸಿಎಂ ಬಳಿ ರಾಮ್‍ದಾಸ್ ಅಸಮಧಾನ ಹೊರಹಾಕಿದರು.
ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಮೈಸೂರು ಅರಮನೆಯನ್ನು ಬಿಜೆಪಿ ಸರ್ಕಾರ ಒಡೆದು ಹಾಕುತ್ತದೆಯೇ? ದೇವಸ್ಥಾನ, ಗುಡಿಗೋಪುರಗಳ ಕೂಡ ಗುಂಬಜ್ ಮಾದರಿಯಲ್ಲೇ ಇವೆ.ಇದನ್ನು ಕೂಡ ಸರ್ಕಾರ ಕೆಡವಿ ಹಾಕಲಿ ಎಂದು ಅಭಿಯಾನ ನಡೆಸುತ್ತಿದ್ದಾರೆ. ನಾವು ಉತ್ತರ ಕೊಡುವುದು ಕಷ್ಟವಾಗಿದೆ ಎಂದು ಹೇಳಿರುವುದಾಗಿ ಗೊತ್ತಾಗಿದೆ.
ಸುಖಾಸುಮ್ಮನೆ ಅವರು ವಿವಾದವನ್ನು ಎಳೆದುಕೊಳ್ಳುತ್ತಾರೆ. ಹಿಂದೆ ಟಿಪ್ಪು ಜಯಂತಿ, ಸಿಎಎ ವಿರುದ್ಧದ ಹೋರಾಟದಲ್ಲೂ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ತುಚ್ಛವಾಗಿ ಮಾತನಾಡಿದರು.
ಮೈಸೂರಿನ ಜನತೆ ಹೇಳಿಕೇಳಿ ಶಾಂತಿಪ್ರಿಯರು. ಕೋಮುಗಲಭೆ, ಹಿಂದೂ ಮತಗಳ ಧ್ರುವೀಕರಣಕ್ಕೂ ಅವಕಾಶ ಕೊಡುವುದಿಲ್ಲ. ಸಂಸದರಾಗಿ ಅವರು ಮಾಡಬೇಕಾದ ಕೆಲಸಗಳು ಸಾಕಷ್ಟಿವೆ ಈ ರೀತಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ತಕ್ಷಣವೇ ಅವರನ್ನು ಕರೆಸಿ ಮಾತನಾಡಬೇಕೆಂದು ರಾಮ್‍ದಾಸ್ ಭಿನ್ನವಿಸಿಕೊಂಡರು.
ನಾನು ಆದಷ್ಟು ಶೀಘ್ರ ಪ್ರತಾಪ್ ಸಿಂಹ ಬಳಿ ಮಾತನಾಡುವೆ. ವಿವಾದ ಏಕಾಯಿತು ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತೇನೆ. ಪಕ್ಷದ ಚೌಕಟ್ಟು ಯಾರು ಕೂಡ ಮೀರಬಾರದು. ಅಗತ್ಯವಿದ್ದರೆ ನಾನು ಮತ್ತು ಪಕ್ಷದ ಅಧ್ಯಕ್ಷರು, ಅವರನ್ನು ಕರೆಸಿಕೊಂಡು ಬುದ್ದಿ ಹೇಳುವ ಕೆಲಸ ಮಾಡುತ್ತೇವೆ ಎಂದು ಬೊಮ್ಮಾಯಿ ಅಭಯ ನೀಡಿದ್ದಾರೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಂಸದ ಪ್ರತಾಪ್ ಸಿಂಹ, ಗುಂಬಜ್ ಮಾದರಿಯ ಬಸ್ ನಿಲ್ದಾಣಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಒಡೆದು ಹಾಕಲಾಗುವುದು ಎಂದು ಎಚ್ಚರಿಸಿದ್ದರು. ಅವರ ಈ ಹೇಳಿಕೆ ಇದೀಗ ಒಂದು ಸಮುದಾಯದವರು ಕಣ್ಣು ಕೆಂಪಾಗುವಂತೆ ಮಾಡಿದೆ.
ಅಲ್ಲದೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೂ ಕಾರಣವಾಗಿದೆ.

andolanait

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

33 mins ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

6 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

6 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

6 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

16 hours ago