131 ಪಾರಂಪರಿಕ ಕಟ್ಟಡಗಳ ಸ್ಥಿತಿ ಪರಿಶೀಲನೆಗೆ ಸಮಿತಿ : ಆನಂದ್ ಸಿಂಗ್
ಬೆಳಗಾವಿ (ಸುವರ್ಣ ಸೌಧ): ಮೈಸೂರು ನಗರದ ೧೩೧ ಪಾರಂಪರಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಪಾರಂಪರಿಕ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ತಜ್ಞರ ಸಮಿತಿ ನೇಮಿಸಲಾಗಿದೆ. ಸಮಿತಿ ಭೌತಿಕ ಪರಿಶೀಲನೆ ವರದಿ ಬಂದ ನಂತರ ದುರಸ್ತಿ ಮತ್ತು ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಹೇಳಿದರು.
ಮಂಗಳವಾರ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಸಿ.ಎನ್.ಮಂಜೇಗೌಡ ರವರು ೩೩೦ನೇ ನಿಯಮದಡಿ ಪ್ರಸ್ತಾಪಿಸಿದ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಚಿವರು ಉತ್ತರಿಸಿದರು.
೧೯೬೧ರ ಕರ್ನಾಟಕ ನಗರ ಮತ್ತು ಗ್ರಾಮೀಣ ಪ್ರದೇಶ ಯೋಜನಾ ಕಾಯ್ದೆ ಹಾಗೂ ವಲಯವಾರು ನಿಯಮಗಳ ತಿದ್ದುಪಡಿ ಅನುಸಾರ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಂಪರೆ ಸಂರಕ್ಷಣಾ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಅಧಿಕಾರಿಗಳು, ತಜ್ಞರು, ವಾಸ್ತುಶಿಲ್ಪಿಗಳು ಮತ್ತು ಸ್ವಯಂಸೇವಾ ಪ್ರತಿನಿಧಿಗಳು ಸೇರಿ ಒಟ್ಟು ೨೭ ಸದಸ್ಯರಿರುತ್ತಾರೆ ಎಂದರು.
ವಿಧಾನ ಪರಿಷತ್ ಶಾಸಕ ಸಿ.ಎನ್.ಮಂಜೇಗೌಡ ಮೈಸೂರು ನಗರದಲ್ಲಿ ಯದುವಂಶದ ಆಳ್ವಿಕೆಯಲ್ಲಿ ನಿರ್ಮಿಸಿದ ನೂರಾರು ಐತಿಹಾಸಿಕ ಪಾರಂಪರಿಕ ಸ್ಮಾರಕಗಳಿವೆ. ಈ ಪಾರಂಪರಿಕ ಕಟ್ಟಡಗಳನ್ನು ಯಾರು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಸರಿಯಾದ ನೀತಿ – ನಿಯಮಾವಳಿಗಳೇ ಇಲ್ಲ. ಇವೆಲ್ಲದಕ್ಕಿಂತ ಪ್ರಮುಖವಾಗಿ ಮುಂಬಯಿ, ಅಹಮದಾಬಾದ್, ಹೈದರಾಬಾದ್‌ನಂಥ ನಗರಗಳಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸುವ ಸಲುವಾಗಿಯೇ ಅಲ್ಲಿನ ಸರ್ಕಾರಗಳು ಒಂದು ಕಾಯಿದೆಯನ್ನೇ ರೂಪಿಸಿವೆ. ಕರ್ನಾಟಕಕ್ಕೂ ಇಂಥದ್ದೊಂದು ಕಾಯ್ದೆ, , ನೀತಿ-ನಿಯಮ ಅಗತ್ಯವಿದೆ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ನಿಯಮ ಜಾರಿಗೆ ತರಬೇಕು ಎಂದರು.
ಪಾರಂಪರಿಕ ಕಟ್ಟಡಗಳು ಸರಿಯಾದ ನಿರ್ವಹಣೆಗೆ ಸರ್ಕಾರ ಬಜೆಟ್‌ನಲ್ಲಿ ವಾರ್ಷಿಕವಾಗಿ ರೂ. 1000 ಕೋಟಿಗಳನ್ನು ಕಾಯ್ದಿರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಇದಕ್ಕೆ ವಿಧಾನ ಪರಿಷತ್ ಶಾಸಕ ಮರಿತಿಬ್ಬೇಗೌಡ ಸಹಮತ ಸೂಚಿಸಿದರು.
ಮೈಸೂರಿನಲ್ಲಿ ಒಟ್ಟಾರೆ ೨೩೪ ಪಾರಂಪರಿಕ ಕಟ್ಟಡಗಳಿವೆ. ಈ ಪೈಕಿ ೧೩೧ ಕಟ್ಟಡಗಳನ್ನು ಸರ್ಕಾರ ಮಾನ್ಯ ಮಾಡಿದೆ. ಇದರಲ್ಲಿ 24 ಕಟ್ಟಡಗಳಿಗೆ ತುರ್ತಾಗಿ ದುರಸ್ತಿಯ ಅವಶ್ಯಕತೆ ಇದೆ ಎಂದು ಪಾರಂಪರಿಕ ತಜ್ಞರು ವರದಿ ನೀಡಿದ್ದಾರೆ.
-ಸಿ.ಎನ್.ಮಂಜೇಗೌಡ, ವಿಧಾನಪರಿಷತ್ ಸದಸ್ಯ
ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…
ಹೊಸದಿಲ್ಲಿ : ಭಾರತೀಯ ರೈಲ್ವೆ ಇಲಾಖೆಯು ಡಿಸೆಂಬರ್ 26ರಿಂದ ಅನ್ವಯವಾಗುವಂತೆ ಹೊಸ ರೈಲು ಟಿಕೆಟ್ ದರವನ್ನು ಪರಿಷ್ಕರಣೆ ಮಾಡಿದೆ. ಪ್ರಯಾಣಿಕರಿಗೆ…
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…
ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…
ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…