ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಹ್ಲಾದ್ ಮೋದಿ ಅವರು ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ಆಗಮಿಸುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಹ್ಲಾದ್ ಮೋದಿ ಅವರ ದವಡೆಗೆ ಗಾಯಗಳಾಗಿದ್ದು, ಅವರ ಸೊಸೆ ತಲೆಗೆ ಗಾಯವಾಗಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕ ರಾಮದಾಸ್, ಜೆಎಸ್ ಎಸ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಎಸ್ ಪಿ ಮಂಜುನಾಥ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…
ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…
ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…
ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…