ಜಿಲ್ಲೆಗಳು

ಕಡಕೋಳ ಬಳಿ ಪ್ರಧಾನಿ ಸಹೋದರನ ಕಾರು ಅಪಘಾತ: ಐವರು ಆಸ್ಪತ್ರೆಗೆ ದಾಖಲು

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ.


ಪ್ರಹ್ಲಾದ್ ಮೋದಿ ಅವರು ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ಆಗಮಿಸುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಹ್ಲಾದ್ ಮೋದಿ ಅವರ ದವಡೆಗೆ ಗಾಯಗಳಾಗಿದ್ದು, ಅವರ ಸೊಸೆ ತಲೆಗೆ ಗಾಯವಾಗಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕ ರಾಮದಾಸ್, ಜೆಎಸ್‌ ಎಸ್‌ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಎಸ್‌ ಪಿ ಮಂಜುನಾಥ್‌ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago