ಹನೂರು : ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ ಬಳಿ ಜರುಗಿದೆ.
ಮೈಸೂರಿನ ಜನತಾ ನಗರದ ನಿವಾಸಿಗಳಾದ ಒಂದೇ ಕುಟುಂಬದ ಪವಿತ್ರ(10), ಪೂಜಾ(23), ಮಹದೇವಮ್ಮ(40), ಜಯಲಕ್ಷ್ಮಿ(18), ಸೇರಿದಂತೆ ಮಂಜುಳಾ (40)ರವರು ಗಾಯಗೊಂಡಿದ್ದಾರೆ.
ಮೈಸೂರಿನಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಗೂಡ್ಸ್ ಆಟೋಗೆ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಶುಕ್ರವಾರ ಸಂಜೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋದ ಹಿಂಬದಿಯಲ್ಲಿ ಕುಳಿತಿದ್ದ ಐವರು ಗಾಯಗೊಂಡಿದ್ದಾರೆ. ತಕ್ಷಣ ದಾರಿ ಹೋಕರು 108 ಆಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ತುರ್ತು ವೈದ್ಯಕೀಯ ಸಿಬ್ಬಂದಿ ಮೂರ್ತಿ ಹಾಗೂ ಚಾಲಕ ಕೃಷ್ಣ ಪ್ರಥಮ ಚಿಕಿತ್ಸೆ ನೀಡಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ಈ ಪೈಕಿ ಜಯಲಕ್ಷ್ಮಿ ರವರ ತಲೆಗೆ ಅತಿಯಾದ ಪೆಟ್ಟು ಬಿದ್ದಿರುವುದರಿಂದ ಹಾಗೂ ಮಹದೇವರಮ್ಮ ರವರಿಗೆ ಬೆನ್ನು ಮೂಳೆ ಮುರಿದಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.