೨ ದಶಕ ಕಳೆದರೂ ರಸ್ತೆ ದುರಸ್ತಿಗೊಳಿಸದ ಲೋಕೋಪಯೋಗಿ ಇಲಾಖೆ; ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲು ಗ್ರಾಮಸ್ಥರ ನಿರ್ಧಾರ
ಲಕ್ಷ್ಮೀಕಾಂತ್ ಕೋವಾರಪ್ಪ
ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ ಪ್ರದೇಶದ ಸಂಪರ್ಕ ರಸ್ತೆಗಳು ದುರಸ್ತಿ ಕಾರ್ಯದಿಂದ ದೂರವೇ ಉಳಿದಿವೆ. ಇದಕ್ಕೆ ತಾಲ್ಲೂಕಿನ ಮಸಗೋಡು, ನೇರುಗಳಲೆ, ಅರೆಯೂರು, ಹೊಸಳ್ಳಿ, ಸೀಗೆಹೊಸೂರು, ಕಣಿವೆ ವಾರ್ಗದ ೧೮ ಕಿ.ಮೀ. ರಸ್ತೆಯೂ ಹೊರತಾಗಿಲ್ಲ.
ಎರಡು ದಶಕಗಳಿಂದ ರಸ್ತೆ ದುರಸ್ತಿ ಕಾರ್ಯ ಕಾಣದ ಈ ರಸ್ತೆಯಲ್ಲೇ ಸಂಚರಿಸಬೇಕಾದ ಅನಿವಾರ್ಯತೆ ಸ್ಥಳೀಯರದ್ದು. ರಸ್ತೆ ದುರಸ್ತಿಗಾಗಿ ಹಲವಾರು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಿದ್ದರೂ ಬೇಡಿಕೆ ಈಡೇರಿಲ್ಲ ಎಂಬುದು ಗ್ರಾಮಸ್ಥರ ಅಸಮಾಧಾನ.
ತಿಂಗಳ ಹಿಂದೆ ರಸ್ತೆ ಕಾಮಗಾರಿಗೆ ಅನುದಾನ ಕಲ್ಪಿಸಬೇಕು ಇಲ್ಲದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಸ್ತೆ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಅಧಿಕಾರಿಗಳಿಗೆ ಲಿಖಿತವಾಗಿ ಎಚ್ಚರಿಕೆ ನೀಡಿದ್ದರೂ ಇದುವರೆಗೆ ಯಾವುದೇ ಪ್ರೋಂಜನ ಆಗಿಲ್ಲ. ಜೊತೆಗೆ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಯಾವುದೇ ಉತ್ತರವನ್ನೂ ನೀಡಿಲ್ಲ. ಇದರಿಂದ ಅಸಮಾಧನಗೊಂಡಿರುವ ಗ್ರಾಮಸ್ಥರು ಸಹಜವಾಗಿಯೇ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.
ಹತ್ತು ವರ್ಷಗಳ ಹಿಂದೆ ಈ ರಸ್ತೆಯಲ್ಲಿ ೫ ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ವಿದ್ಯಾರ್ಥಿಗಳು ನೆಮ್ಮದಿಯಿಂದ ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದರು. ಗ್ರಾಮದ ಜನರಿಗೂ ಯಾವುದೇ ತೊಂದರೆಯಾಗಿರಲಿಲ್ಲ. ಆದರೆ ಈ ಹಾಳಾದ ರಸ್ತೆಯಿಂದ ಬಸ್ಸುಗಳ ಸಂಚಾರ ಕೂಡ ನಿಂತಿದೆ. ಆಟೋ ರಿಕ್ಷಾಗಳಲ್ಲಿ ದುಬಾರಿ ಹಣ ಕೊಟ್ಟು ನಗರಕ್ಕೆ ತೆರಳಬೇಕು. ವಿದ್ಯಾರ್ಥಿಗಳು, ಸ್ಥಳೀಯರು ನಗರಕ್ಕೆ ತೆರಳಲು ಕಷ್ಟಪಾಡುವಂತಾಗಿದೆ. ಈಗ ಸೀಗೆಹೊಸೂರು ಸೇತುವೆ ಕೂಡ ಕುಸಿಯುವ ಹಂತ ತಲುಪಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ರಸ್ತೆ ದುರಸ್ತಿ ವಾಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ನೇರುಗಳಲೆ ಹಾಗೂ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಜನರು ಮತದಾನ ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇಂದು ಪ್ರತಿಭಟನೆ: ರಸ್ತೆ ಕಾಮಗಾರಿಗೆ ಅನುದಾನ ಕಲ್ಪಿಸುವಂತೆ ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒಂದು ತಿಂಗಳು ಕಳೆದಿದೆ. ಆದರೂ ಯಾವುದೇ ಉತ್ತರ ಸಿಗದ ಹಿನ್ನೆಲೆಯಲ್ಲಿ ಅ.೧೦ರಿಂದ ಲೋಕೋಪಯೋಗಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಮಸಗೋಡು-ಕಣಿವೆ ರಸ್ತೆ ಅಭಿವೃದ್ಧಿ ಹೋರಾಟ ಸಮಿತಿ ತಿಳಿಸಿದೆ.
ಸೋಮವಾರ ಪಟ್ಟಣದ ಅಂಬೇಡ್ಕರ್ ಪ್ರತಿಮೆಯಿಂದ ಪ್ರತಿಭಟನಾ ಮೆರವಣಿಗೆ ನಡೆುಂಲಿದೆ. ಲೋಕೋಪಯೋಗಿಯ ಇಲಾಖೆಯ ಕಚೇರಿ ಮುಂದೆ ನಡೆಯಲಿರುವ ಧರಣಿಯಲ್ಲಿ ಗ್ರಾಮೀಣ ಜನರು ಭಾಗವಹಿಸಲಿದ್ದಾರೆ. ಸ್ಥಳಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳು ಬರಬೇಕು. ಬೇಡಿಕೆ ಆಲಿಸಬೇಕು. ಸೂಕ್ತವಾಗಿ ಸ್ಪಂದಿಸದಿದ್ದರೆ ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೋರಾಟ ಸಮಿತಿ ಹಾಗೂ ಗ್ರಾಮದ ಮುಖ್ಯಸ್ಥರು ತಿಳಿಸಿದ್ದಾರೆ.
ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳು ರಸ್ತೆ ದುರಸ್ತಿಪಡಿಸುವ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ನೆಗಳ್ಳೆ, ಹೊಸಳ್ಳಿ, ಕಣಿವೆ, ಜೇನುಕಲ್ಲು ಬೆಟ್ಟ, ನೇರಳೆ, ಅರೆುೂಂರು ಸೇರಿದಂತೆ ನೇರುಗಳಲೆ ಹಾಗೂ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಸೇರಿ ಸೋಮವಾರಪೇಟೆುಂ ಲೋಕೋಪಯೋಗಿ ಇಲಾಖೆ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಿದ್ದೇವೆ.
-ಎಸ್.ಎನ್.ಅನಂತ್, ಅಧ್ಯಕ್ಷರು, ಮಸಗೋಡು-ಕಣಿವೆ ರಸ್ತೆ ಅಭಿವೃದ್ಧಿ ಹೋರಾಟ ಸಮಿತಿ.
ಸೋಮವಾರಪೇಟೆಯ ಮಸಗೋಡು, ನೇರುಗಳಲೆ, ಅರೆುೂಂರು, ಹೊಸಳ್ಳಿ, ಸೀಗೆಹೊಸೂರು, ಕಣಿವೆ ವಾರ್ಗದ ೧೮ ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟಿದೆ. ರಸ್ತೆ ದುರಸ್ತಿಗೆ ಸಾಕಷ್ಟು ಮನವಿ ವಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಸಂಬಂಧಪಟ್ಟವರು ರಸ್ತೆ ದುರಸ್ತಿಗೆ ಮುಂದಾಗಬೇಕು.
-ಬೋಜೇಗೌಡ, ಹೊಸಳ್ಳಿ ಗ್ರಾಮಸ್ಥರು
ಕೆಲ ವರ್ಷಗಳ ಹಿಂದೆ ಈ ರಸ್ತೆಯಲ್ಲಿ ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಈಗ ಹದಗೆಟ್ಟ ರಸ್ತೆಯಿಂದ ಬಸ್ಸುಗಳ ಸಂಚಾರ ನಿಂತಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ. ಈಗ ಸೀಗೆಹೊಸೂರು ಸೇತುವೆ ಕೂಡ ಬೀಳುವ ಹಂತ ತಲುಪಿದೆ.
-ರತನ್ ಕೆ.ಎನ್, ಕಾರ್ಯದರ್ಶಿ, ಮಸಗೋಡು-ಕಣಿವೆ ರಸ್ತೆ ಅಭಿವೃದ್ಧಿ ಹೋರಾಟ ಸಮಿತಿ
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…